ಮನೆ ರಾಷ್ಟ್ರೀಯ ಸೆಪ್ಟೆಂಬರ್ 18 ರಿಂದ 22ರವರೆಗೆ ಐದು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ: ಸಚಿವ ಪ್ರಲ್ಹಾದ್...

ಸೆಪ್ಟೆಂಬರ್ 18 ರಿಂದ 22ರವರೆಗೆ ಐದು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ: ಸಚಿವ ಪ್ರಲ್ಹಾದ್ ಜೋಶಿ

0

ನವದೆಹಲಿ: ಸೆಪ್ಟೆಂಬರ್ 18 ರಿಂದ 22ರವರೆಗೆ ಐದು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಮೂಲಗಳ ಪ್ರಕಾರ ಈ ಅಧಿವೇಶನದಲ್ಲಿ 10ಕ್ಕೂ ಹೆಚ್ಚು ಮಹತ್ವದ ಮಸೂದೆಗಳನ್ನು ಮಂಡಿಸಲಾಗುವುದು. ಮಸೂದೆಯಿಂದಾಗಿ ವಿಶೇಷ ಅಧಿವೇಶನ ಕರೆಯಲಾಗುತ್ತಿದೆ. ಅಮೃತ ಕಾಲದ ವೇಳೆ ಸಂಸತ್ತಿನಲ್ಲಿ ಅರ್ಥಪೂರ್ಣ ಚರ್ಚೆಗಾಗಿ ಕಾಯುತ್ತಿದ್ದೇನೆ ಎಂದು ಪ್ರಲ್ಹಾದ್ ಜೋಶಿ ಬರೆದಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20 ರಿಂದ ಆಗಸ್ಟ್ 11 ರವರೆಗೆ ನಡೆಯಿತು. ಈ ವೇಳೆ ಮಣಿಪುರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉಭಯ ಸದನಗಳಲ್ಲಿ ಕೋಲಾಹಲ ಉಂಟಾಯಿತು. ಮಣಿಪುರ ವಿಷಯದಲ್ಲಿ ಪ್ರಧಾನಿ ಮೋದಿ ಹೇಳಿಕೆ ನೀಡಬೇಕೆಂದು ಆಗ್ರಹಿಸಿ ವಿರೋಧ ಪಕ್ಷವು ಸದನದಲ್ಲಿ ಕೋಲಾಹಲ ಸೃಷ್ಟಿಸಿತ್ತು.