ಮನೆ ರಾಜ್ಯ ಚಾಮುಂಡಿಬೆಟ್ಟದಲ್ಲಿ ಅರಣ್ಯ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ: ಉಲ್ಲಂಘಿಸಿದರೆ ದಂಡ

ಚಾಮುಂಡಿಬೆಟ್ಟದಲ್ಲಿ ಅರಣ್ಯ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ: ಉಲ್ಲಂಘಿಸಿದರೆ ದಂಡ

0

ಮೈಸೂರು: ಚಾಮುಂಡಿಬೆಟ್ಟವನ್ನು ಕಸ ಹಾಗೂ ಪ್ಲಾಸ್ಟಿಕ್ ಮುಕ್ತ ಮಾಡಲು ಮೈಸೂರು ಅರಣ್ಯ ಸಂರಕ್ಷಣಾಧಿಕಾರಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಇಂದಿನಿಂದ (ಸೆಪ್ಟೆಂಬರ್ 01) ಹೊಸ ಆದೇಶ ಜಾರಿಯಾಗಿದೆ.

ಪ್ಲಾಸ್ಟಿಕ್ ಬಿಸಾಕಿದರೆ 500 ರೂ ದಂಡ. ಮೊದಲ ಬಾರಿಗೆ ತ್ಯಾಜ್ಯ ಬಿಸಾಡಿದರೆ 2,500 ದಂಡ, ಎರಡನೇ ಬಾರಿಗೆ 5 ಸಾವಿರ ರೂ. ಇನ್ನು ಮೂರನೇ ಬಾರಿಗೆ 10 ಸಾವಿರ ಹಾಗೂ ಲೈಸನ್ಸ್ ರದ್ದು ಮಾಡಲಾಗುವುದು ಎಂದು ಚಾಮುಂಡಿಬೆಟ್ಟದ ಅಂಗಡಿಯವರಿಗೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಯಾವುದಕ್ಕೆ ಎಷ್ಟೆಷ್ಟು ದಂಡ?

ಸ್ಟಿಕ್ ಬಿಸಾಕಿದರೆ 500 ರೂ ದಂಡ

ಮೊದಲ ಬಾರಿಗೆ ತ್ಯಾಜ್ಯ ಬಿಸಾಡಿದರೆ 2,500 ರೂ. ದಂಡ

ಎರಡನೇ ಬಾರಿಗೆ 5 ಸಾವಿರ ರೂ.

ಮೂರನೇ ಬಾರಿಗೆ 10 ಸಾವಿರ ಹಾಗೂ ಲೈಸನ್ಸ್ ರದ್ದು

ಅರಣ್ಯದ ಒಳಗೆ ತೆರಳಿದರೆ 500 ರೂ. ದಂಡ

ನಿರ್ಬಂಧಿತ ಪ್ರದೇಶದಲ್ಲಿ ವಾಹನ ನಿಲುಗಡೆ ಮಾಡಿದರೆ 1 ಸಾವಿರ ರೂ. ದಂಡ

ರಾತ್ರಿ 10 ರಿಂದ ಬೆ 6 ಗಂಟೆಯವರೆಗೆ ಚಾಮುಂಡಿಬೆಟ್ಟಕ್ಕೆ ನಿರ್ಬಂಧ

ಮದ್ಯ ಹಾನಿಕಾರಕ ವಸ್ತು ಸಾಗಿಸಿದರೆ 5 ಸಾವಿರ ರೂ. ದಂಡ

ಕಾಡು ಪ್ರಾಣಿಗಳಿಗೆ ಆಹಾರ ನೀಡಿದರೆ 1 ಸಾವಿರ ರೂ. ದಂಡ