ಮನೆ ರಾಜ್ಯ ಆಸ್ಪತ್ರೆಯಲ್ಲಿದ್ದುಕೊಂಡೇ ಕಾವೇರಿ ಹೋರಾಟಕ್ಕೆ ಕರೆ ನೀಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಆಸ್ಪತ್ರೆಯಲ್ಲಿದ್ದುಕೊಂಡೇ ಕಾವೇರಿ ಹೋರಾಟಕ್ಕೆ ಕರೆ ನೀಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

0

ಬೆಂಗಳೂರು: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಈಗಾಗಲೇ ‘ಕಾವೇರಿ ಹೋರಾಟ’ ಪ್ರಾರಂಭವಾಗಿದ್ದು, ಆಸ್ಪತ್ರೆಯಲ್ಲಿದ್ದುಕೊಂಡೇ ಈ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕರೆ ನೀಡಿದ್ದಾರೆ.

ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೆಚ್ ​ಡಿಕೆ ಅವರ ಆರೋಗ್ಯ ವಿಚಾರಿಸಲು ಮಾಜಿ ಶಾಸಕ ಡಾ.ಕೆ ಅನ್ನದಾನಿ ಇಂದು ತೆರಳಿದ್ದರು. ಅವರ ಜತೆ ಚರ್ಚೆ ನಡೆಸಿದ ಕುಮಾರಸ್ವಾಮಿ ನಾಳೆಯಿಂದ ಜೆಡಿಎಸ್​ ನಿಂದ ಚಳವಳಿ ನಡೆಸುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಾಹಿತಿ ನೀಡಿದ ಮಾಜಿ ಶಾಸಕ ಅನ್ನದಾನಿ, ಸದ್ಯ ಕಾವೇರಿ ಪರಿಸ್ಥಿತಿ ಬಗ್ಗೆ ಚರ್ಚೆ ಮಾಡಿದರು. ಅರ್ಧ ಗಂಟೆಗೂ ಹೆಚ್ಚು ಕಾಲ ನನ್ನೊಟ್ಟಿಗೆ ಮಾತನಾಡಿದ್ದಾರೆ. ಅವರು ಆರೋಗ್ಯವಾಗಿದ್ದಾರೆ. ಕಾವೇರಿ ನೀರು ಉಳಿವಿಗಾಗಿ ಹೋರಾಟ ಶುರು ಮಾಡಿ ಎಂದು ಕರೆ ಕೊಟ್ಟಿದ್ದಾರೆ ಎಂದು ತಿಳಿಸಿದರು.

ನಾಳೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡರ ನೇತೃತ್ವದಲ್ಲಿ ಚಳವಳಿ ಆರಂಭವಾಗಲಿದೆ. ಸದ್ಯದ ನೀರಿನ ಪರಿಸ್ಥಿತಿ ಬಹಳ ಕೆಟ್ಟದಾಗಿದೆ. ಮುಂದಿನ ದಿನಗಳಲ್ಲಿ ಮಂಡ್ಯ ಸೇರಿದಂತೆ ಬೆಂಗಳೂರಿಗೂ ನೀರಿನ ಅಭಾವ ಎದುರಾಗಲಿದೆ. ಹೀಗಾಗಿ, ಚಳವಳಿ ಅಗತ್ಯವಿದೆ ಎಂದು ಕುಮಾರಣ್ಣ ಹೇಳಿದ್ದಾರೆ. ಅದರಂತೆ ನಾಳೆಯಿಂದ ಚಳವಳಿ ಆರಂಭಿಸುತ್ತೇವೆ ಎಂದು ಮಾಜಿ ಶಾಸಕ ಅನ್ನದಾನಿ ಹೇಳಿದರು.