ಮೈಸೂರು: ಬೆಳೆ ಕಾವಲಿಗೆ ಹೋದ ರೈತನ ಮೇಲೆ ಆನೆ ದಾಳಿ ಮಾಡಿರುವ ಘಟನೆ ಜಿಲ್ಲೆಯ ಸರಗೂರು ತಾಲೂಕಿನ ಕುಂದೂರು ಗ್ರಾಮದ ಹೊರವಲಯದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಸಿದ್ದರಾಜ ನಾಯ್ಕ (35) ಆನೆದಾಳಿಯಿಂದ ಗಂಭೀರವಾಗಿ ಗಾಯಗೊಂಡ ರೈತ.
ಕುಂದೂರು ಗ್ರಾಮದ ಹೊರವಲಯದ ತನ್ನ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳನ್ನು ಕಾವಲು ಕಾಯಲೆಂದು ರೈತ ಸಿದ್ದರಾಜು ತೆರಳಿದ್ದ ವೇಳೆ ಕಾಡಾನೆ ದಾಳಿ ಮಾಡಿದ್ದು, ರೈತ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಾಹಿತಿ ತಿಳಿದ ಕುಟುಂಬಸ್ಥರು ಸ್ಥಳಕ್ಕೆ ದೌಡಾಯಿಸಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಸಾವು ಬದುಕಿನ ನಡುವೆ ಸಿದ್ದರಾಜು ಹೋರಾಟ ನಡೆಸುತ್ತಿದ್ದಾರೆ.














