ಬೆಂಗಳೂರು: ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದರೂ, ಅದರ ಸಮರ್ಪಕ ಬಳಕೆ ಆಗಿಲ್ಲ, ಪ್ರಕೃತಿ, ಪರಿಸರ ಮತ್ತು ಅರಣ್ಯ ನಾಶವಾಗದಂತೆ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಹೊಸ ನೀತಿ ತರುವ ಅಗತ್ಯವಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಪಾದಿಸಿದ್ದಾರೆ.
ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಸಾಹಸ ಪ್ರವಾಸೋದ್ಯಮವನ್ನೂ ಪರಿಸರ ಪ್ರವಾಸೋದ್ಯಮದ ಭಾಗ ಮಾಡಬಹುದು. ಆಗ ಇದು ಹೆಚ್ಚು ಜನರನ್ನು ಆಕರ್ಷಿಸುತ್ತದೆ ಎಂದು ಸಚಿವರು ಹೇಳಿದರು.
ರಿವರ್ ರಾಫ್ಟಿಂಗ್, ಚಾರಣವೇ ಮೊದಲಾದ ಪರಿಸರ ಸಂಬಂಧಿತ ಪ್ರವಾಸೋದ್ಯಮಕ್ಕೆ ಇಂದಿನ ಯುವಜನರಲ್ಲಿ ಹೆಚ್ಚಿನ ಆಸಕ್ತಿ ಇದೆ. ಹೀಗಾಗಿ ಅರಣ್ಯ ಪ್ರದೇಶದೊಳಗೆ ಇರಬಹುದಾದ ಇಂತಹ ತಾಣಗಳಲ್ಲಿ ಪ್ರವಾಸೋದ್ಯಮಕ್ಕೆ ಅನುವು ಮಾಡಿಕೊಡುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಿ ಹೊಸ ನೀತಿ ರೂಪಿಸಲು ವರದಿ ಸಲ್ಲಿಸುವಂತೆ ತಿಳಿಸಿದರು.
ಈ ಸಂಬಂಧ ಪರಿಸರ ತಜ್ಞರು, ಪ್ರವಾಸೋದ್ಯಮ ಇಲಾಖೆ ಮತ್ತಿತರ ಬಾಧ್ಯಸ್ಥರೊಂದಿಗೆ ಚರ್ಚಿಸಿ ರೂಪುರೇಷೆ ರೂಪಿಸುವಂತೆ ತಿಳಿಸಿದರು.
ಕರ್ನಾಟಕದಲ್ಲಿ 300 ಕಿ.ಮೀಗೂ ಹೆಚ್ಚಿನ ಕರಾವಳಿ ಇದ್ದು, ಇಲ್ಲಿಯೂ ಪರಿಸರ ಪ್ರವಾಸೋದ್ಯಮಕ್ಕೆ ಅವಕಾಶಗಳು ಹೆಚ್ಚಾಗಿವೆ. ಈ ಸಾಮರ್ಥ್ಯದ ಸದ್ಬಳಕೆಗೆ ಹೆಚ್ಚಿನ ಹಣಕಾಸಿನ ಹೂಡಿಕೆ ಬೇಕಾಗುತ್ತದೆ. ಬಂಡವಾಳ ಆಕರ್ಷಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆಯೂ ಸಮಗ್ರ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಹಿರಿಯ ಐ.ಎ.ಎಸ್. ಅಧಿಕಾರಿಗಳಾದ ಕಪಿಲ್ ಮೋಹನ್, ಮಂಜುನಾಥ್ ಪ್ರಸಾದ್, ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಾದ ರಾಜೀವ್ ರಂಜನ್, ಸುಭಾಷ್ ಮಾಲ್ಕೆಡೆ, ಸಂಜಯ್ ಬಿಜ್ಜೂರ್, ಕುಮಾರ್ ಪುಷ್ಕರ್ ಮತ್ತಿತರರು ಪಾಲ್ಗೊಂಡಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.