ಹೊಸದಿಲ್ಲಿ: ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ನೀಡುವ ಪದವಿ ಮತ್ತು ತಾತ್ಕಾಲಿಕ ಪ್ರಮಾಣ ಪತ್ರಗಳಲ್ಲಿ ವಿದ್ಯಾರ್ಥಿಗಳ ಆಧಾರ ಸಂಖ್ಯೆಯನ್ನು ನಮೂದಿಸಕೂಡದು ಎಂದು ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗ (ಯುಜಿಸಿ) ವಿವಿಗಳಿಗೆ ಸೂಚನೆ ನೀಡಿದೆ.
ವಿವಿಗಳು ಪ್ರಮಾಣ ಪತ್ರ ಕೊಡ ಮಾಡವಾಗಲೇ ಅದರಲ್ಲಿ ವಿದ್ಯಾರ್ಥಿಗಳ ಸಂಪೂರ್ಣ ಆಧಾರ್ ಸಂಖ್ಯೆಯನ್ನು ನಮೂದಿಸಿದರೆ, ಭವಿಷ್ಯದಲ್ಲಿ ಉದ್ಯೋಗ ನೇಮಕಾತಿ ಸಂದರ್ಭಗಳಲ್ಲಿ ದಾಖಲಾತಿ ಪರಿಶೀಲನೆ ಮಾಡಲು ಸಹಾಯವಾಗುತ್ತದೆ ಎನ್ನುವ ನಿಟ್ಟಿನಲ್ಲಿ ವಿವಿಗಳಿಗೆ ನಿರ್ದೇಶನ ನೀಡಲು ಹಲವು ರಾಜ್ಯ ಸರ್ಕಾರಗಳು ಪ್ರಸ್ತಾವಿಸುತ್ತಿರುವುದು ವರದಿಯಾಗಿತ್ತು.
ಈ ಹಿನ್ನೆಲೆಯಲ್ಲಿ ನಿಯಮಗಳ ಪ್ರಕಾರ ಆಧಾರ್ ಸಂಖ್ಯೆಯನ್ನು ಒಳಗೊಂಡಿರುವ ಯಾವುದೇ ದಾಖಲಾತಿಯನ್ನು ಬಹಿರಂಗಪಡಿಸುವಂತಿಲ್ಲ ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆಧಾರ ಸಂಖ್ಯೆಯನ್ನು ಪ್ರಮಾಣ ಪತ್ರದಲ್ಲಿ ನಮೂದಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಯುಜಿಸಿ ಕಾರ್ಯದರ್ಶಿ ಮನಿಷ್ ಜೋಶಿ ಸ್ಪಷ್ಟ ಪಡಿಸಿದ್ದಾರೆ.














