ಮನೆ ರಾಷ್ಟ್ರೀಯ ಮೂರು ಅಂತಸ್ತಿನ ಕಟ್ಟಡ ಕುಸಿತ: ಇಬ್ಬರ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಮೂರು ಅಂತಸ್ತಿನ ಕಟ್ಟಡ ಕುಸಿತ: ಇಬ್ಬರ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

0

ಉತ್ತರ ಪ್ರದೇಶ: ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಮೃತಪಟ್ಟು ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.

ಘಟನಾ ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ ಡಿಆರ್‌ ಎಫ್) ತಂಡ ಆಗಮಿಸಿದ್ದು, ಅವಶೇಷಗಳಡಿ ಸಿಲುಕಿರುವ ನಾಲ್ವರನ್ನು ರಕ್ಷಣೆ ಮಾಡಿದ್ದು ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ.

ಸೋಮವಾರ ಮುಂಜಾನೆ ಸುಮಾರು ಮೂರು ಗಂಟೆಯ ವೇಳೆಗೆ ಘಟನೆ ಸಂಭವಿಸಿದ್ದು, ಗಾಯಾಳುಗಳನ್ನು ಲಕ್ನೋ ಟ್ರಾಮಾ ಸೆಂಟರ್‌ ಗೆ ದಾಖಲಿಸಲಾಗಿದೆ. ಕಟ್ಟಡದ ಅವಶೇಷಗಳಡಿ ಅಕ್ಕಪಕ್ಕದ ಮನೆಗಳಲ್ಲಿದ್ದವರೂ ಸಿಕ್ಕಿಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ತಂಡದಿಂದ ಕಾರ್ಯಾಚರಣೆ ನಡೆಯುತ್ತಿದೆ.