ಮನೆ ಕ್ರೀಡೆ ಏಷ್ಯಾಕಪ್ ನ ಐದನೇ ಪಂದ್ಯ: ಇಂದು ಭಾರತ-ನೇಪಾಳ ಮುಖಾಮುಖಿ

ಏಷ್ಯಾಕಪ್ ನ ಐದನೇ ಪಂದ್ಯ: ಇಂದು ಭಾರತ-ನೇಪಾಳ ಮುಖಾಮುಖಿ

0

ಪಲ್ಲಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಏಷ್ಯಾಕಪ್ ನ ಐದನೇ ಪಂದ್ಯ ನಡೆಯಲಿದ್ದು, ಭಾರತ-ನೇಪಾಳ ಉಭಯ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಪಾಕ್ ವಿರುದ್ಧದ ಪಂದ್ಯ ರದ್ದಾದ ಪರಿಣಾಮ ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಲೇಬೇಕಿದೆ. ಅತ್ತ ನೇಪಾಳ ಕೂಡ ಪಾಕ್ ವಿರುದ್ಧ ಸೋತಿರುವ ಕಾರಣದಿಂದಾಗಿ ಇಂದಿನ ಪಂದ್ಯ ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ.

ಭಾರತ ಮತ್ತು ನೇಪಾಳ ನಡುವಿನ ಪಂದ್ಯ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ 1, ಸ್ಟಾರ್ ಸ್ಪೋರ್ಟ್ಸ್ 3 ಮತ್ತು ಸ್ಟಾರ್ ಸ್ಪೋರ್ಟ್ಸ್ ಸೆಲೆಕ್ಟ್ ಎಚ್ ಡಿ)ನಲ್ಲಿ ಪಂದ್ಯ ವನ್ನು ವೀಕ್ಷಿಸಬಹುದು.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್. 

ನೇಪಾಳ ತಂಡ: ರೋಹಿತ್ ಪೌಡೆಲ್ (ನಾಯಕ), ಆಸಿಫ್ ಶೇಖ್, ಕುಶಾಲ್ ಭುರ್ಟೆಲ್, ಲಲಿತ್ ರಾಜಬಂಶಿ, ಭೀಮ್ ಸರ್ಕಿ, ಕುಶಾಲ್ ಮಲ್ಲಾ, ದೀಪೇಂದ್ರ ಸಿಂಗ್ ಐರಿ, ಸಂದೀಪ್ ಲಮಿಚಾನೆ, ಕರಣ್ ಕೆಸಿ, ಗುಲ್ಶನ್ ಝಾ, ಸೋಂಪಾಲ್, ಆರಿಫ್ ಶೇಖ್, ಪ್ರತಿಸ್ ಜಿಸಿ, ಕಿಶೋರ್ ಮಹತೋ, ಅರ್ಜುನ್, ಸಂದೀಪ್ ಜೋರಾ, ಸೌದ್ ಮತ್ತು ಶ್ಯಾಮ್ ಧಾಕಲ್.