ಮನೆ ಶಿಕ್ಷಣ 2023-24ನೇ ಶೈಕ್ಷಣಿಕ ಸಾಲಿನಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯು ವಿದ್ಯಾರ್ಥಿಗಳಿಗೆ ವರ್ಷಕ್ಕೆ ಮೂರು...

2023-24ನೇ ಶೈಕ್ಷಣಿಕ ಸಾಲಿನಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯು ವಿದ್ಯಾರ್ಥಿಗಳಿಗೆ ವರ್ಷಕ್ಕೆ ಮೂರು ಬಾರಿ ಪರೀಕ್ಷೆ: ಮಧು ಬಂಗಾರಪ್ಪ

0

ಬೆಂಗಳೂರು:  2023-24ನೇ ಶೈಕ್ಷಣಿಕ ಸಾಲಿನಿಂದ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯು ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಇದುವರೆಗೆ ವರ್ಷಕ್ಕೆ 2 ಪರೀಕ್ಷೆ ಮಾತ್ರ ನಡೆಸುತ್ತಿದ್ದ ಶಿಕ್ಷಣ ಇಲಾಖೆ, ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಫೇಲ್​​​ ಅಥವಾ ಕಡಿಮೆ ಅಂಕ ಬಂದವರು 3 ಬಾರಿ ಪರೀಕ್ಷೆ ಬರೆಯಬಹುದು.  ವರ್ಷದಲ್ಲಿ ಇನ್ಮುಂದೆ ಕಲಿಕಾ ಚೇತರಿಕೆಯ ಕಾರಣದಿಂದಾಗಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಬಾರಿ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಘೋಷಣೆ ಮಾಡಿದರು.

ಯಾವುದೇ ಕಾರಣಕ್ಕೂ ಮಕ್ಕಳಿಗೆ ಒಂದು ವರ್ಷ ವ್ಯರ್ಥ ಆಗಬಾರದು ಎಂದು ವರ್ಷದಲ್ಲಿ ಮೂರು ಬಾರಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವಂತಹ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ವೇಳಾಪಟ್ಟಿ

ಪರೀಕ್ಷೆ-1 ಮಾರ್ಚ್​​ 1ರಿಂದ ಮಾರ್ಚ್​ 25ರವರೆಗೆ ನಡೆಸಲು ನಿರ್ಧಾರ

ಪರೀಕ್ಷೆ-2 ಮೇ 15ರಿಂದ ಜೂನ್​ 5ರವರೆಗೆ ನಡೆಸಲು ನಿರ್ಧಾರ

ಪರೀಕ್ಷೆ-3 ಜುಲೈ 12ರಿಂದ ಜುಲೈ 30ರವರೆಗೆ ನಡೆಸಲು ನಿರ್ಧಾರ

10ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಿರುವ 3 ಪರೀಕ್ಷೆಗಳ ವೇಳಾಪಟ್ಟಿ

ಪರೀಕ್ಷೆ-1 ಮಾರ್ಚ್​ 30ರಿಂದ ಏಪ್ರಿಲ್​ 15ರವರೆಗೆ ನಡೆಸಲು ನಿರ್ಧಾರ

ಪರೀಕ್ಷೆ-2 ಜೂನ್​ 12ರಿಂದ ಜೂನ್​ 19ರವರೆಗೆ ನಡೆಸಲು ನಿರ್ಧಾರ

ಪರೀಕ್ಷೆ-3 ಜುಲೈ 29ರಿಂದ ಆಗಸ್ಟ್​ 5ರವರೆಗೆ ನಡೆಸಲು ತೀರ್ಮಾನ

ಇದನ್ನು ಇಂದು (ಸೆಪ್ಟೆಂಬರ್ 05) ವಿಧಾನಸಸೌಧದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇದನ್ನು ಘೋಷಿಸಿದರು.  ಈ ನಿಯಮದ ಪ್ರಕಾರ ವಿದ್ಯಾರ್ಥಿಗಳು, ಕೆಲ ವಿಷಯಗಳಲ್ಲಿ ಫೇಲ್ ಆದರೂ ಮುಂದಿನ ತರಗತಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ.

ಒಟ್ಟು ಅಂಕ ಪೈಕಿ ಕನಿಷ್ಠ ಅಂಕಗಳನ್ನ ತೇರ್ಗಡೆ ಮಾನದಂಡವಾಗಿ ಪರಿಗಣನೆ ಮಾಡಲಾಗುತ್ತದೆ. ಕನಿಷ್ಠ ಅಂಕಗಳೊಂದಿಗೆ ವಿದ್ಯಾರ್ಥಿ ಕೆಲ ವಿಷಯಗಳಲ್ಲಿ ಫೇಲ್ ಆದರೂ ಮುಂದಿನ ತರಗತಿಗೆ ಪ್ರವೇಶಕ್ಕೆ ಅನುಮತಿ ಕಲ್ಪಿಸಲಾಗುತ್ತದೆ. ಕಲಿಕಾ ಗುಣಮಟ್ಟ ಹಾಗೂ ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸಲು ಸರ್ಕಾರ ಈ ಹೊಸ ನಿಯಮವನ್ನು ಘೋಷಣೆ ಮಾಡಿದೆ.