ಮನೆ ಕ್ರೀಡೆ ವಿಶ್ವಕಪ್ ಕ್ರಿಕೆಟ್: ಭಾರತ ತಂಡ ಪ್ರಕಟ

ವಿಶ್ವಕಪ್ ಕ್ರಿಕೆಟ್: ಭಾರತ ತಂಡ ಪ್ರಕಟ

0

ನವದೆಹಲಿ: ಅಕ್ಟೋಬರ್ 5ರಿಂದ ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕೂಟಕ್ಕೆ ಭಾರತ ತಂಡವನ್ನು ಅಂತಿಮಗೊಳಿಸಲಾಗಿದೆ. 15 ಜನರ ತಂಡವನ್ನು ಆಯ್ಕೆ ಮಾಡಿದ್ದು, ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.

ಹಾರ್ದಿಕ್ ಪಾಂಡ್ಯಾ ಉಪನಾಯಕರಾಗಿರಲಿದ್ದಾರೆ. ಕೆಲ ಸ್ಟಾರ್ ಆಟಗಾರರಿಗೆ ಈ ಬಾರಿ ವಿಶ್ವಕಪ್‌ ನಿಂದ ಕೊಕ್ ನೀಡಲಾಗಿದೆ.

ಸಂಜು ಸ್ಯಾಮ್ಸನ್ ಮತ್ತು ತಿಲಕ್‌ ವರ್ಮಾ ಅವರನ್ನು ಕೈಬಿಡಲಾಗಿದೆ. ಗಾಯಗೊಂಡಿದ್ದ ಕೆ.ಎಲ್.ರಾಹುಲ್ ಹಾಗೂ ಶ್ರೇಯಸ್ ಐಯ್ಯರ್ ತಂಡಕ್ಕೆ ಮರಳಿದ್ದಾರೆ.

ಈ ಬಾರಿ ತಂಡದಲ್ಲಿ ಮೂವರು ಎಡಗೈ ಸ್ಪಿನ್ನರ್‌ ಗಳು, ಮೂವರು ವೇಗಿಗಳನ್ನು ಬಿಸಿಸಿಐ ಆಯ್ಕೆ ಮಾಡಿದೆ. ಈ ಕುರಿತು ರೋಹಿತ್ ಶರ್ಮಾ ಮತ್ತು ಬಿಸಿಸಿಐ ಆಯ್ಕೆ ಸಮಿತಿಯ ಮುಖ್ಯಸ್ಥ ಅಜಿತ್ ಅಗರ್ಕರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭ್‌ಮನ್‌ ಗಿಲ್‌, ವಿರಾಟ್ ಕೊಹ್ಲಿ, ಶ್ರೇಯಸ್ ಐಯ್ಯರ್, ಇಶಾನ್ ಕೀಶನ್, ಕೆ.ಎಲ್.ರಾಹುಲ್, ಹಾರ್ದಿಕ್ ಪಾಂಡ್ಯಾ (ಉಪನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಆಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಜಸಪ್ರೀತ್ ಬೂಮ್ರಾ, ಮಹಮ್ಮದ್ ಶಮಿ, ಮಹಮ್ಮದ್ ಸಿರಾಜ್, ಕುಲದೀಪ್ ಯಾದವ್‌