ಮನೆ ರಾಜ್ಯ ಬೆಂ-ಮೈ ರಾಷ್ಟ್ರೀಯ ಹೆದ್ದಾರಿಯ ರಾಂಗ್ ಸೈಡ್​ ನಲ್ಲಿ ವಾಹನ ಚಲಾಯಿಸಿದರೆ ಕಠಿಣ ಕ್ರಮ: ಅಲೋಕ್ ಕುಮಾರ್

ಬೆಂ-ಮೈ ರಾಷ್ಟ್ರೀಯ ಹೆದ್ದಾರಿಯ ರಾಂಗ್ ಸೈಡ್​ ನಲ್ಲಿ ವಾಹನ ಚಲಾಯಿಸಿದರೆ ಕಠಿಣ ಕ್ರಮ: ಅಲೋಕ್ ಕುಮಾರ್

0

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯ ರಾಂಗ್ ಸೈಡ್​ ನಲ್ಲಿ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಮಂಗಳವಾರ ಸಾಮಾಜಿಕ ಮಾಧ್ಯಮ ಎಕ್ಸ್​ (ಟ್ವಿಟರ್) ನಲ್ಲಿ ಪೋಸ್ಟ್‌ ಮಾಡಿರುವ ಅಲೋಕ್ ಕುಮಾರ್, ರಾಷ್ಟ್ರೀಯ ಹೆದ್ದಾರಿಯ ರಾಂಗ್​ ಸೈಡ್ ​ನಲ್ಲಿ ವಾಹನ ಚಲಾಯಿಸದಿರಿ. ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದರು.

ವಿನಯ್‌ ಕುಮಾರ್ ಘನಶ್ಯಾಮ್ ಎಂಬುವವರು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಾಂಗ್ ​ಸೈಡ್​ ನಲ್ಲಿ ವಾಹನ ಚಲಾಯಿಸುತ್ತಿರುವ ವಿಡಿಯೋ ಹಂಚಿಕೊಂಡು, “ಅಲೋಕ್ ಕುಮಾರ್ ಸರ್, ಇಂದು ಬೆಂಗಳೂರು ಮೈಸೂರು ಎಕ್ಸ್‌ ಪ್ರೆಸ್‌ ವೇಯಲ್ಲಿ ದ್ವಿಚಕ್ರ ವಾಹನಗಳು ಸೇರಿದಂತೆ ಹಲವಾರು ವಾಹನಗಳು ವಿರುದ್ಧ ದಿಕ್ಕಿನಲ್ಲಿ ಬರುತ್ತಿವೆ. ಈ ರಸ್ತೆಯಲ್ಲಿ ಏನೂ ಬದಲಾಗಿಲ್ಲ, ದಯವಿಟ್ಟು ಕೆಲವು ಗಂಭೀರ ಕ್ರಮಗಳನ್ನು ತೆಗೆದುಕೊಳ್ಳಿ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಲೋಕ್ ಕುಮಾರ್, ಅಪಾಯಕಾರಿ ಚಾಲನೆಗಾಗಿ ವಾಹನದ ವಿರುದ್ಧ 184 ಐಎಂವಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುತ್ತಿದೆ ಮತ್ತು ಡಿಎಲ್ ಅನ್ನು ಸಹ ಅಮಾನತುಗೊಳಿಸಲು ನಾವು ಶಿಫಾರಸು ಮಾಡುತ್ತಿದ್ದೇವೆ. ನೋಟಿಸ್ ನೀಡಲಾಗಿದೆ. ಇನ್ನು ಮುಂದೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸುವ ಸವಾರರ ವಿರುದ್ಧ ಎಫ್ ಐಆರ್ ದಾಖಲಿಸಲಾಗುವುದು ಮತ್ತು ಡಿಎಲ್ ಅಮಾನತಿಗೂ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.