ಮನೆ ಮನರಂಜನೆ ಸೆ.15 ಕ್ಕೆ  ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಬಾನದಾರಿಯಲ್ಲಿ’ ಚಿತ್ರ ಬಿಡುಗಡೆ

ಸೆ.15 ಕ್ಕೆ  ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಬಾನದಾರಿಯಲ್ಲಿ’ ಚಿತ್ರ ಬಿಡುಗಡೆ

0

ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಪ್ರೀತಂ ಗುಬ್ಬಿ ಜೋಡಿ ರೊಮ್ಯಾಂಟಿಕ್-ಅಡ್ವೆಂಚರ್  ‘ಬಾನದಾರಿಯಲ್ಲಿ’ ಚಿತ್ರ ಸೆಪ್ಟೆಂಬರ್ 15ಕ್ಕೆ ಬಿಡುಗಡೆಯಾಗಲಿದೆ.

ಈ ಚಿತ್ರವು ಪ್ರೀತಂ ಜೊತೆ ಗಣೇಶ್ ಅವರ ನಾಲ್ಕನೇ ಚಿತ್ರವಾಗಿದೆ. ಪ್ರೀತಂ ಗುಬ್ಬಿ ಈ ಹಿಂದೆ ಗಣೇಶ್  ಜೋತೆ ಮುಂಗಾರು ಮಳೆ ಸಿನಿಮಾದಲ್ಲಿ ಸಹ-ಬರಹಗಾರರಾಗಿ ಕೆಲಸ ಮಾಡಿದ್ದರು. ಬಳಿಕ ಅವರು ಗಣೇಶ್ ಅವರೊಂದಿಗೆ ಮಳೆಯಲಿ ಜೊತೆಯಲಿ, ದಿಲ್ ರಂಗೀಲಾ, ಮತ್ತು 99 ಚಿತ್ರಗಳನ್ನು ನಿರ್ದೇಶಿಸಿದರು.

ಬಾನದಾರಿಯಲ್ಲಿ ಚಿತ್ರದಲ್ಲಿ ಗಣೇಶ್ ಕ್ರಿಕೆಟಿಗನಾಗಿ ಕಾಣಿಸಿಕೊಂಡಿದ್ದಾರೆ. ರುಕ್ಮಿಣಿ ವಸಂತ್ ಮತ್ತು ರೀಷ್ಮಾ ನಾಣಯ್ಯ ಗೋಲ್ಡನ್ ಸ್ಟಾರ್ ಜೊತೆಗೆ ನಟಿಸಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಪ್ರೀತಂ ಗುಬ್ಬಿ ಈ ಜೋಡಿ ಇದೀಗ ಬಾನದಾರಿಯಲ್ಲಿ ಮೂಲಕ ಮತ್ತೊಮ್ಮೆ ಮೋಡಿ ಮಾಡಲು ಪ್ರೇಕ್ಷಕರ ಮುಂದೆ ಬರುತ್ತಿದೆ.

ಚಿತ್ರಕ್ಕೆ ಕಥೆಯನ್ನು ಸಿನಿಮಾಟೋಗ್ರಾಫರ್ ಪ್ರೀತಾ ಜಯರಾಮನ್ ಬರೆದಿದ್ದು, ಪ್ರೀತಂ ಚಿತ್ರಕಥೆ ಬರೆದಿದ್ದಾರೆ. ಅರ್ಜುನ್ ಜನ್ಯ ಅವರ ಸಂಗೀತ ಮತ್ತು ಅಭಿಲಾಷ್ ಕಲತಿ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಸೆಪ್ಟೆಂಬರ್ 15ಕ್ಕೆ ಬಾನದಾರಿಯಲ್ಲಿ ಚಿತ್ರ ಬಿಡುಗಡೆಯಾಗಲಿದೆ ಚಿತ್ರವನ್ನು ಕಣ್ ತುಂಬಿಕೊಳ್ಳಲು ಗೋಲ್ಡನ್ ಸ್ಟಾರ್ ಗಣೇಶ್ ಅವರ ಅಭಿಮಾನಿಗಳು ಕಾಯುತ್ತಿದ್ದಾರೆ.