ಮನೆ ರಾಷ್ಟ್ರೀಯ ಸನಾತನ ಧರ್ಮ ವಿವಾದ: ಉದಯನಿಧಿ ಸ್ಟಾಲಿನ್, ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್

ಸನಾತನ ಧರ್ಮ ವಿವಾದ: ಉದಯನಿಧಿ ಸ್ಟಾಲಿನ್, ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್

0

ನವದೆಹಲಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ ಐಆರ್ ದಾಖಲಿಸಲಾಗಿದೆ.

ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಕುರಿತು ಉದಯನಿಧಿ ಸ್ಟಾಲಿನ್ ಕರೆ ನೀಡಿದ್ದಕ್ಕಾಗಿ ಜೊತೆಗೆ ಅವರ ಹೇಳಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಖರ್ಗೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿ ಉತ್ತರ ಪ್ರದೇಶದ ರಾಂಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಐಪಿಸಿಯ ಸೆಕ್ಷನ್ 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಮತ್ತು 153 ಎ (ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಕೀಲರಾದ ಹರ್ಷಗುಪ್ತಾ ಮತ್ತು ರಾಮ್ ಸಿಂಗ್ ಲೋಧಿ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ, ಅವರ ಹೇಳಿಕೆಯಿಂದ ಧಾರ್ಮಿಕ ಭಾವನೆಗಳಿಕೆ ಧಕ್ಕೆಯುಂಟಾಗಿದೆ ಎಂದು ದೂರು ದಾಖಲಾಗಿತ್ತು.

ಕಳೆದ ಶನಿವಾರ ತಮಿಳುನಾಡಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗಳಿಗೆ ಹೋಲಿಕೆ ಮಾಡಿ ಮಾತನಾಡಿದ್ದು, ಅಲ್ಲದೆ ಸನಾತನ ಧರ್ಮವನ್ನು ಬೇರು ಸಮೇತ ಕಿತ್ತು ಹಾಕಬೇಕು ಎಂದು ಹೇಳಿಕೆ ನೀಡಿದ್ದರು.