ಬೆಂಗಳೂರು: ಕಾಶ್ಮೀರದ ಮುಸ್ಲಿಂ ಯುವಕ ತನ್ನನ್ನು ಬಳಸಿಕೊಂಡು, ಮತಾಂತರ ಮಾಡಿ ಈಗ ಬೆದರಿಕೆ ಹಾಕುತ್ತಿದ್ದಾನೆ. ನಾನ್ ಲವ್ ಜಿಹಾದ್ಗೆ ಒಳಗಾಗಿದ್ದೇನೆಂದು ಆರೋಪಿಸಿ ಯುವತಿಯೊಬ್ಬಳು ಟ್ವೀಟ್ ಮಾಡಿದ್ದಾಳೆ.
ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರು ನಗರ ಪೊಲೀಸ್ ಹಾಗೂ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಗೆ ಟ್ಯಾಗ್ ಮಾಡಿ ನೆರವಿಗೆ ದಾವಿಸುವಂತೆ ಮನವಿ ಮಾಡಿದ್ದಾಳೆ.
ನಾನು ಲವ್ ಜಿಹಾದ್ಗೆ ಒಳಗಾಗಿದ್ದೇನೆ, ನನ್ನ ಮೇಲೆ ಅತ್ಯಾಚಾರ ನಡೆದಿದೆ. ಬಲವಂತವಾಗಿ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ನಡೆದಿದೆ. ನಾನು ಅಪಾಯದಲ್ಲಿದ್ದೇನೆ. ತುರ್ತಾಗಿ ನನಗೆ ಬೆಂಗಳೂರು ಪೊಲೀಸರ ಸಹಾಯ ಬೇಕಿದೆ ಎಂದು ಯುವತಿ ಟ್ವೀಟ್ ಮಾಡಿದ್ದಾಳೆ.
ಟ್ವೀಟ್ ನಲ್ಲಿ ಕೆಲ ವಿಚಾರಗಳನ್ನು ಸಹ ಉಲ್ಲೇಖಿಸಿರುವ ಯುವತಿ, ಫೇಸ್ ಬುಕ್ ಮೂಲಕ ಕಾಶ್ಮೀರ ಯುವಕನ ಪರಿಚಯವಾಗಿ ಇಬ್ಬರ ನಡುವೆ ಹಣಕಾಸಿನ ವ್ಯವಹಾರವೂ ನಡೆದಿತ್ತು. ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚನೆ ಎಸಗಿದ್ದಾನೆ. ಸದ್ಯ ಮದುವೆಯಾಗುವುದಿಲ್ಲ ಎಂದು ತನ್ನನ್ನು ನಿರ್ಲಕ್ಷ್ಯಿಸಿದ್ದಾನೆ. ತನಗೆ ಪ್ರಾಣ ಬೆದರಿಕೆ ಹಾಕಿರುವ ಆರೋಪವೂ ಮಾಡಿದ್ದು, ಈ ಬಗ್ಗೆ ಬೆಂಗಳೂರು ಪೊಲೀಸರು ಜೊತೆಗೆ ಕಾಶ್ಮೀರ ಪೊಲೀಸರಿಗೂ ಟ್ವೀಟ್ ಮಾಡಿದ್ದಾಳೆ.
ಯುವತಿಯ ಟ್ವೀಟ್ ಗಮನಿಸಿದ ಪೊಲೀಸರು, ಸ್ಥಳೀಯರ ಪೊಲೀಸ್ ಠಾಣೆಗೆ ದೂರು ನೀಡುವಂತೆ ಸೂಚಿಸಿದ್ದಾರೆ. ಅದರಂತೆ, ಸಂತ್ರಸ್ಥ ಯುವತಿ, ಬೆಳ್ಳಂದೂರು ಠಾಣಾ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
ಹೆಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ
ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲ…
ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು
70 ವರ್ಷ ಮೇಲ್ಪಟ್ಟ ಹಿರಿಯ ವಯಸ್ಕರಿಗೂ ಲಭಿಸುತ್ತದೆ ಆಯುಷ್ಮಾನ್ ಭಾರತ್ ಯೋಜನೆ
ಹೇ ಬಾಲ್ಯವೇ ನೀ ಮತ್ತೊಮ್ಮೆ ಮಾರುಕಳಿಸು…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.