ವಾಷಿಂಗ್ಟನ್: ಮೊರಾಕ್ಕೋದ ಮರಕೇಶ್ ನ ನೈಋತ್ಯ ಭಾಗದಲ್ಲಿ ಶುಕ್ರವಾರ ತಡರಾತ್ರಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಘಟನೆಯಲ್ಲಿ 296 ಜನ ಸಾವನ್ನಪ್ಪಿದ್ದಾರೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.
ಮರಕೇಶ್ ನ ನೈಋತ್ಯಕ್ಕೆ 44 ಮೈಲಿ (71 ಕಿಲೋಮೀಟರ್) ದೂರದಲ್ಲಿ ರಾತ್ರಿ 11:11 ಕ್ಕೆ 18.5 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ.
ರಾಜಧಾನಿ ರಬಾತ್ ನಿಂದ ದಕ್ಷಿಣಕ್ಕೆ 320 ಕಿಲೋಮೀಟರ್ ದೂರದಲ್ಲಿರುವ ಪ್ರವಾಸಿ ನಗರ ಮರ್ರಾಕೆಚ್ ಪ್ರದೇಶದಲ್ಲಿ 27 ಜನರು ಸಾವನ್ನಪ್ಪಿದ್ದಾರೆ. ದಕ್ಷಿಣಕ್ಕೆ ಔರ್ಜಾಜೆಟ್ ಪ್ರಾಂತ್ಯದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮೂಲಗಳನ್ನು ಉಲ್ಲೇಖಿಸಿ ವರದಿ ತಿಳಿಸಿದೆ.
ಭೂಕಂಪನದ ವೇಳೆ ಸೆರೆ ಹಿಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು, ಕಿರಿದಾದ ಗಲ್ಲಿಗಳಲ್ಲಿ ವಸ್ತುಗಳು ಹಾರುತ್ತಿರುವುದು ಮತ್ತು ಕಪಾಟುಗಳಿಂದ ವಸ್ತುಗಳು ನೆಲಕ್ಕೆ ಬೀಳುತ್ತಿರುವುದನ್ನು ತೋರಿಸಲಾಗಿದೆ.
ಭೂಕಂಪಗಳ ಪರಿಣಾಮದ ಬಗ್ಗೆ ಪ್ರಾಥಮಿಕ ಮೌಲ್ಯಮಾಪನಗಳನ್ನು ಒದಗಿಸುವ USGS’s PAGER ವ್ಯವಸ್ಥೆಯು ಆರ್ಥಿಕ ನಷ್ಟಗಳಿಗೆ ಆರೆಂಜ್ ಅಲರ್ಟ್ ನೀಡಿದೆ. ಅಲ್ಲದೆ, ಗಮನಾರ್ಹ ಹಾನಿಯನ್ನು ಅಂದಾಜು ಮಾಡುವ ಸಾಧ್ಯತೆಯಿದೆ ಮತ್ತು ಕಂಪನ ಸಂಬಂಧಿತ ಸಾವುನೋವುಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.