ಮನೆ ಮನರಂಜನೆ ಅಕ್ಟೋಬರ್ 6 ರಂದು ವಿನೋದ್‌ ಪ್ರಭಾಕರ್‌ ನಟನೆಯ “ಫೈಟರ್‌’ ಚಿತ್ರ ಬಿಡುಗಡೆ

ಅಕ್ಟೋಬರ್ 6 ರಂದು ವಿನೋದ್‌ ಪ್ರಭಾಕರ್‌ ನಟನೆಯ “ಫೈಟರ್‌’ ಚಿತ್ರ ಬಿಡುಗಡೆ

0

ವಿನೋದ್‌ ಪ್ರಭಾಕರ್‌ ನಟನೆ “ಫೈಟರ್‌’ ಚಿತ್ರ ಅಕ್ಟೋಬರ್‌ 06 ರಂದು ತೆರೆಕಾಣುತ್ತಿದೆ. ಮೊದಲ ಹಂತವಾಗಿ ಚಿತ್ರತಂಡ ಇತ್ತೀಚೆಗೆ ಚಿತ್ರದ ಟೀಸರ್‌ ಬಿಡುಗಡೆ ಮಾಡಿತ್ತು. ಈ ಟೀಸರ್‌ಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಸಿನಿಮಾದ ನಿರೀಕ್ಷೆ ಹೆಚ್ಚಿಸಿದೆ.

ತಮ್ಮ ಸಿನಿಮಾ ಕುರಿತು ಮಾತನಾಡುವ ವಿನೋದ್‌, “ಫೈಟರ್‌ ನಲ್ಲಿ ಬರೀ ಹೋರಾಟ ಹಾಗೂ ಹೊಡೆದಾಟವಿಲ್ಲ. ತಂದೆ- ತಾಯಿ ಹಾಗೂ ಮಗನ ಬಾಂಧವ್ಯದ ಸನ್ನಿವೇಶಗಳು ಎಲ್ಲರ ಮನ ಮುಟ್ಟಲಿದೆ. ಜೊತೆಗೆ ಥ್ರಿಲ್ಲರ್‌ ಅಂಶಗಳನ್ನ ಒಳಗೊಂಡ ಕೌಟುಂಬಿಕ ಮನರಂಜನೆಯ ಚಿತ್ರ ಇದಾಗಿದೆ.ಈ ಚಿತ್ರದಲ್ಲಿ ಸಮಾಜದ ವ್ಯವಸ್ಥೆಯ ವಿರುದ್ಧ ಹೋರಾಡುವ ಫೈಟರ್‌’ ಎನ್ನುತ್ತಾರೆ.

 “ನಮ್ಮ ಫೈಟರ್‌ ಅನ್ಯಾಯದ ವಿರುದ್ಧ ಹಾಗೂ ತನ್ನ ಕುಟುಂಬಕ್ಕಾಗಿ ಹೋರಾಡುವವನು. ಈ ಚಿತ್ರದಲ್ಲಿ ವಿನೋದ್‌ ಪ್ರಭಾಕರ್‌ ಹೊಸ ಲುಕ್‌ ನಲ್ಲಿ ಕಾಣಿಸಿಕೊಂಡಿದ್ದಾರೆ. ನಿರ್ಮಾಪಕ ಸೋಮಶೇಖರ್‌ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಗುರುಕಿರಣ್‌ ಸಂಗೀತ ನೀಡಿದ್ದಾರೆ. ಪಾವನ ಹಾಗೂ ಲೇಖಾ ಚಂದ್ರ ನಾಯಕಿ ಯರಾಗಿ ನಟಿಸಿದ್ದಾರೆ. ಸುಮಾರು ವರ್ಷಗಳ ನಂತರ ನಟಿ ನಿರೋಷ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ’ ಎನ್ನುವುದು ನಿರ್ದೇಶಕ ನೂತನ್‌ ಉಮೇಶ್‌ ಮಾತು.