ಮನೆ ಸ್ಥಳೀಯ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು: ಇಬ್ಬರಿಗೆ ಗಾಯ

ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು: ಇಬ್ಬರಿಗೆ ಗಾಯ

0

ಮೈಸೂರು: ನಿಯಂತ್ರಣ ತಪ್ಪಿ ಕಾರು ಉರುಳಿ ಬಿದ್ದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರಿನ ಬೋಗಾದಿ ಬಡಾವಣೆ ಬಳಿ ನಡೆದಿದೆ.

ವಿಚಾರ ತಿಳಿದು ತಕ್ಷಣ ಸ್ಥಳಕ್ಕೆ‌ 108 ಆ್ಯಂಬುಲೆನ್ಸ್‌ ನ ಧರಣೇಶ್ ಹಾಗೂ ಚಾಲಕ ಸುರೇಂದ್ರನಾಥ್ ಧಾವಿಸಿದ್ದು, ಕಾರಿನಲ್ಲಿ ಸಿಲುಕಿದ್ದ ರಾಘವನ್ ಹಾಗೂ ನಿಶ್ಚಲ್ ಸಾಯಿ ಅವರನ್ನು ಸ್ಥಳೀಯರ ಸಹಾಯದಿಂದ ರಕ್ಷಿಸಿದ್ದಾರೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ. ಮೂರು ವಿದ್ಯುತ್ ಕಂಬಗಳು ಜಖಂ ಆಗಿವೆ.

ಕೃಷ್ಣರಾಜ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.