ಮನೆ ಅಪರಾಧ ಕೆಎಸ್​ ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ: 9 ಜನರಿಗೆ ಗಾಯ

ಕೆಎಸ್​ ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ: 9 ಜನರಿಗೆ ಗಾಯ

0

ಚಿಕ್ಕಮಗಳೂರು: ಕೆಎಸ್​ ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಬಿಲ್ಲೇನಹಳ್ಳಿ ಗ್ರಾಮದ ಬಳಿ ನಡೆದಿದೆ.

ಶಿವಮೊಗ್ಗದಿಂದ ತರೀಕೆರೆಗೆ ಬರುತ್ತಿದ್ದ ಕೆಎಸ್​ ಆರ್​ ಟಿಸಿ ಬಸ್ ಹಾಗೂ ತರೀಕೆರೆಯಿಂದ ಭದ್ರಾವತಿಗೆ ತೆರಳುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಇಂದು(ಸೆ.12) ಬೆಳಗ್ಗೆ ಮುಖಾಮುಖಿ ಡಿಕ್ಕಿಯಾಗಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.

ಇನ್ನು ಗಾಯಗೊಂಡಿರುವ ಭದ್ರಾವತಿ ಮೂಲದ 9 ಜನರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.