ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್ ಆ್ಯಪ್ ನಲ್ಲಿ ಸಾಲು ಸಾಲು ಅಪ್ಡೇಟ್ ಗಳು ಬರಲು ತಯಾರಾಗಿದೆ. ಹೀಗಿರುವಾಗ ಇಂದು ಮತ್ತೊಂದು ನೂತನ ಆಯ್ಕೆಯ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಸದ್ಯದಲ್ಲೇ ವಾಟ್ಸ್ ಆ್ಯಪ್ ನಲ್ಲಿ ಫಿಲ್ಟರ್ ಆಯ್ಕೆ ಬರಲಿದ್ದು, ಇದು ಚಾಟ್ ಲಿಸ್ಟ್ ನಲ್ಲಿ ಮಹತ್ವದ ಬದಲಾವಣೆ ತರಲಿದೆ.
ವಾಟ್ಸ್ ಆ್ಯಪ್ ಅಪ್ಡೇಟ್ ಗಳ ಟ್ರ್ಯಾಕರ್, WabetaInfo ನ ವರದಿಯ ಪ್ರಕಾರ, ಮೆಟಾ-ಮಾಲೀಕತ್ವದ ಇನ್ ಸ್ಟಂಟ್ ಮೆಸೇಜಿಂಗ್ ಅಪ್ಲಿಕೇಶನ್ ಬಳಕೆದಾರರಿಗೆ ಚಾಟ್ ಪಟ್ಟಿಯನ್ನು ಫಿಲ್ಟರ್ ಎಂಬ ಹೊಸ ವೈಶಿಷ್ಟ್ಯವನ್ನು ನೀಡಲು ಮುಂದಾಗಿದೆ. ಸದ್ಯ ಈ ಫೀಚರ್ ಅಭಿವೃದ್ದಿ ಹಂತದಲ್ಲಿದೆ ಎಂದು ಹೇಳಿದೆ.
ವಾಟ್ಸ್ಆ್ಯಪ್ ಬೀಟಾ 2.23.14.17 ಅಪ್ಡೇಟ್ ನಲ್ಲಿ ಇದು ಕಂಡುಬಂದಿದೆ. ಈ ಹೊಸ ಟೂಲ್ ಬಗ್ಗೆ ಸ್ಕ್ರೀನ್ ಶಾಟ್ ಕೂಡ ಹರಿದಾಡುತ್ತಿದೆ. ಈ ಆಯ್ಕೆಯ ಮೂಲಕ ಚಾಟ್ ಲಿಸ್ಟ್ ಅನ್ನು ಸುಲಭವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ.
ಮಾಹಿತಿಯ ಪ್ರಕಾರ, ಫಿಲ್ಟರ್ ನಲ್ಲಿ ಮೂರು ಆಯ್ಕೆಗಳು ಇರಲಿದೆ. ಅನ್ ರೀಡ್ ಮೆಸೇಜೆಸ್, ವೈಯಕ್ತಿಕ ಸಂಭಾಷಣೆಗಳು ಮತ್ತು ವ್ಯವಹಾರ ಸಂಭಾಷಣೆಗಳು ಹೀಗೆ ಮೂರು ಆಯ್ಕೆಗಳು ಇರಲಿದೆ. ವಾಟ್ಸ್ ಆ್ಯಪ್ ಮೇಲ್ಬಾಗದ ಬಲ ಮೂಲೆಯಲ್ಲಿ ಈ ಫಿಲ್ಟನ್ ಬಟನ್ ಇರಲಿದೆ ಎಂದು ಹೇಳಲಾಗಿದೆ.
ಈ ವೈಶಿಷ್ಟ್ಯದ ಮೂಲಕ ಬಳಕೆದಾರರು ಸೆಕೆಂಡುಗಳಲ್ಲಿ ಪ್ರಮುಖ ಚಾಟ್ ಗಳನ್ನು ಪ್ರವೇಶಿಸಬಹುದು. ಆದರೆ, ಗ್ರೂಪ್ ಚಾಟ್ ಗಳಿಗೆ ಇದು ಅನ್ವಯ ಆಗುವುದಿಲ್ಲ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.