ಮದ್ದೂರು: ಗ್ರಾಮ ಲೆಕ್ಕಾಧಿಕಾರಿಯ ಮಾನಸಿಕ ಕಿರುಕುಳ ದಿಂದ ಬೇಸತ್ತು ಗ್ರಾಮ ಸಹಾಯಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಮಾರಸಿಂಗನಹಳ್ಳಿಯಲ್ಲಿ ನಡೆದಿದೆ.
ಗ್ರಾಮ ಸಹಾಯಕ ಅನಿಲ್ ಆತ್ಮಹತ್ಯೆಗೆ ಯತ್ನಿಸಿದ್ದು, ಗ್ರಾಮ ಲೆಕ್ಕಾಧಿಕಾರಿ ಮಧು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಮುಂದಾಗಿದ್ದಾರೆ.
ಮಾರಸಿಂಗನಹಳ್ಳಿಯ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಮನೆಯವರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಕೆಲಸದ ಸಮಯದಲ್ಲಿ ವಿನಾಕಾರಣ ಒತ್ತಡ ಹಾಕುವ ಗ್ರಾಮ ಲೆಕ್ಕಾಧಿಕಾರಿ ಇಲ್ಲಸಲ್ಲದ ಕೆಲಸವನ್ನು ಮಾಡುವಂತೆ ಸೂಚಿಸುತ್ತಾರೆ. ಮಂಗಳವಾರ ಪತ್ನಿಗೆ ನಾಯಿ ಕಚ್ಚಿದ್ದರಿಂದ ಆಕೆಗೆ ಚುಚ್ಚುಮದ್ದು ಹಾಕಿಸಲು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅದಕ್ಕೂ ಮುನ್ನ ಗ್ರಾಮ ಲೆಕ್ಕಾಧಿಕಾರಿಗೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಪ್ ಆಗಿತ್ತು, ಇದರಿಂದ ಮೆಸೇಜ್ ಮಾಡಿದ್ದೆ. ಇದನ್ನ ನೆಪವಾಗಿಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವ ಹೇಳನ ಮಾಡಿದ್ದರು. ಇದರಿಂದ ಮನನೊಂದು ಆತ್ಮಹತ್ಯೆಗೆ ಮುಂದಾಗಿದ್ದೇನೆ ಎಂದು ಗ್ರಾಮ ಸಹಾಯಕ ಅನಿಲ್ ತಿಳಿಸಿದ್ದಾರೆ.
ವಿಚಾರ ತಿಳಿದ ತಹಶೀಲ್ದಾರ್ ನರಸಿಂಹಮೂರ್ತಿ ರಾಜಸ್ವ ನಿರೀಕ್ಷಕ ಗೋವರ್ಧನ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದು ಪ್ರಾಥಮಿಕ ಚಿಕಿತ್ಸೆ ನಂತರ ಮಂಡ್ಯ ಮಿಮ್ಸ್ ಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ.
ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.