ಮೈಸೂರು: ಮೀನಿನ ಅಂಗಡಿಯಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಮಂಡಿ ಠಾಣಾ ಪೊಲೀಸರು ಬಂಧಿಸಿದ್ದು, ಬಂಧಿತರಿಂದ 9,20,000 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.
ಪುಲಕೇಶಿ ರಸ್ತೆಯಲ್ಲಿರುವ ಜಾಮ್ ಜಾಮ್ ಮೀನಿನ ಅಂಗಡಿಯ ರೋಲಿಂಗ್ ಶಟರ್ ಬೀಗ ಮುರಿದು ಅಂಗಡಿಯಲ್ಲಿಟ್ಟಿದ್ದ 11, 50, 000 ರೂ ನಗದು ಹಣವನ್ನು ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ದೂರು ಆಧರಿಸಿ ತನಿಖೆ ಆರಂಭಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಒಟ್ಟು 9, 20, 000 ರೂ.ನಗದು ಹಣವನ್ನು ಅಮಾನತ್ತುಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.