ಮನೆ ಸುದ್ದಿ ಜಾಲ ಅಭಿಷೇಕ ಹಿರೇಮಠ್ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ಕಾಲೇಜ್ ಗೆ ಪೊಲೀಸ್ ಬಿಗಿ ಬಂದೋಬಸ್ತ್

ಅಭಿಷೇಕ ಹಿರೇಮಠ್ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ಕಾಲೇಜ್ ಗೆ ಪೊಲೀಸ್ ಬಿಗಿ ಬಂದೋಬಸ್ತ್

0

ಹುಬ್ಬಳ್ಳಿ(Hubballi) : ರಾಜ್ಯದಲ್ಲಿ ಇಂದಿನಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಕೋಮು ಗಲಭೆ ಪ್ರಕರಣದ ಹಿನ್ನೆಲೆ ವಿಡಿಯೋ ಪೋಸ್ಟ್ ಮಾಡಿದ್ದ ಆರೋಪಿ ಅಭಿಷೇಕ ಹಿರೇಮಠ್‌ ಪೊಲೀಸ್ ಬಿಗಿ ಭದ್ರತೆಯಲ್ಲಿ ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾನೆ.

ವಿವಾದಾತ್ಮಕ ಪೋಸ್ಟ್ ಮಾಡುವ ಮೂಲಕ ಹಳೆ ಹುಬ್ಬಳ್ಳಿ ಗಲಭೆಗೆ ಕಾರಣವಾಗಿದ್ದ ಅಭಿಷೇಕ ಹಿರೇಮಠ್‌ಗೆ ಪರೀಕ್ಷೆ ಬರೆಯಲು ಕೋರ್ಟ್ ಅನುಮತಿ ನೀಡಿದೆ. ಈ ಹಿನ್ನೆಲೆ ನಗರದ ಮಹೇಶ್‌ ಪಿಯು ಕಾಲೇಜಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

ಮಹೇಶ್ ಪಿಯು ಕಾಲೇಜಿನಲ್ಲಿ ಪರೀಕ್ಷೆ ಬರೆಯಲಿರುವ ಅಭಿಷೇಕ್, ಇಂದು ಬ್ಯುಜಿನೆಸ್ ಸ್ಟಡೀಸ್ ವಿಷಯದ ಪರೀಕ್ಷೆಗೆ 10:15ಕ್ಕೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸಲಿದ್ದಾನೆ ಎಂದು ತಿಳಿದು ಬಂದಿದೆ.ಹುಬ್ಬಳ್ಳಿಯ ಕಾರಾಗೃಹದಿಂದ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆ ಬರೆಯಲು ಆಗಮಿಸಲಿದ್ದಾನೆ. ಪರೀಕ್ಷೆ ಬರೆದ ಬಳಿಕ ಮತ್ತೆ ಪೊಲೀಸ್ ಭದ್ರತೆಯಲ್ಲಿ ಜೈಲಿಗೆ ರವಾನಿಸಲಿದ್ದಾರೆ.  ಪರೀಕ್ಷೆ ಮುಗಿಯುವವರೆಗೂ ಇದೇ ರೀತಿ ನಡೆದುಕೊಳ್ಳುವಂತೆ ಕೋರ್ಟ್ ಸೂಚನೆ ನೀಡಿದೆ.