ಮನೆ ಕ್ರೀಡೆ ಏಷ್ಯಾಕಪ್: ಇಂದು ಶ್ರೀಲಂಕಾ ಮತ್ತು ಪಾಕಿಸ್ತಾನ ಮುಖಾಮುಖಿ- ಗೆದ್ದ ತಂಡ ಫೈನಲ್  ಗೆ

ಏಷ್ಯಾಕಪ್: ಇಂದು ಶ್ರೀಲಂಕಾ ಮತ್ತು ಪಾಕಿಸ್ತಾನ ಮುಖಾಮುಖಿ- ಗೆದ್ದ ತಂಡ ಫೈನಲ್  ಗೆ

0

ಕೊಲಂಬೊ (ಶ್ರೀಲಂಕಾ): ಏಷ್ಯಾಕಪ್ ಫೈನಲ್ನಲ್ಲಿ ಸ್ಥಾನ ಪಡೆಯಲು ಇಂದು ಆರ್ ಪ್ರೇಮದಾಸ ಕ್ರಿಡಾಂಗಣದಲ್ಲಿ ಶ್ರೀಲಂಕಾ ಮತ್ತು ಪಾಕಿಸ್ತಾನದ ನಡುವೆ ಹಣಾಹಣಿ ನಡೆಯಲಿದೆ.

ಎರಡೂ ತಂಡಕ್ಕೆ ಫೈನಲ್ ನಲ್ಲಿ ಸ್ಥಾನ ಪಡೆಯಲು ಈ ಪಂದ್ಯದ ಗೆಲುವು ಅನಿವಾರ್ಯ ಆಗಿರುವುದರಿಂದ ಇದನ್ನು ಸೆಮಿಫೈನಲ್ ರೀತಿ ನೋಡಲಾಗುತ್ತಿದೆ. ಪಾಕಿಸ್ತಾನ ಗೆದ್ದು ಫೈನಲ್ ಗೆ ಬಂದಲ್ಲಿ ಮತ್ತೆ ಭಾರತದೊಂದಿಗೆ ಸೆಣಸಾಟ ನಡೆಸಬೇಕಿದೆ.

ಇಂದಿನ ಪಂದ್ಯ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ  ಪಂದ್ಯವನ್ನು ಗೆಲ್ಲಲು ಉಭಯ ತಂಡಗಳು ಸಜ್ಜಾಗಿವೆ. ಹೀಗಾಗಿ ಕ್ರಿಕೆಟ್ ಅಭಿಮಾನಿಗಳ ಕಣ್ಣು ಈ ಪಂದ್ಯದ ಮೇಲೆಯೇ ನೆಟ್ಟಿದೆ. 

ಪಾಕಿಸ್ತಾನ ತಂಡ: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್ (ಉಪನಾಯಕ), ಅಬ್ದುಲ್ಲಾ ಶಫೀಕ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಖರ್ ಅಹ್ಮದ್, ಇಮಾಮ್-ಉಲ್-ಹಕ್, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಝ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಂ ಶಾ, ಸಲ್ಮಾನ್ ಅಲಿ ಅಘಾ, ಸೌದ್ ಶಕೀಲ್, ಶಾಹೀನ್ ಅಫ್ರಿದಿ ಮತ್ತು ಉಸಾಮಾ ಮಿರ್, ತಯ್ಯಬ್ ತಾಹಿರ್ (ಮೀಸಲು ಆಟಗಾರ).

ಶ್ರೀಲಂಕಾ ತಂಡ: ದಸುನ್ ಶನಕಾ (ನಾಯಕ), ಪಾತುಮ್ ನಿಸ್ಸಾನಕ, ದಿಮುತ್ ಕರುಣಾರತ್ನ, ಕುಸಲ್ ಜನಿತ್ ಪೆರೇರಾ, ಕುಸಲ್ ಮೆಂಡಿಸ್ (ಉಪನಾಯಕ), ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ಸದೀರ ಸಮರವಿಕ್ರಮ, ಮಹೀಶ್ ತೀಕ್ಷಣ, ದುನಿತ್ ವೆಲ್ಲಲಾಗೆ, ಮತೀಶ ಪತಿರಣ, ಬಿ ಕಸುನ್ ರಜಿತ, ಬಿ. ಫೆರ್ನಾಂಡೋ, ಪ್ರಮೋದ್ ಮದುಶನ್.