ಮನೆ ಸುದ್ದಿ ಜಾಲ ಕೊರೋನಾ: ಇಂದು 2.68 ಲಕ್ಷ ಹೊಸ ಕೇಸ್ ಪತ್ತೆ

ಕೊರೋನಾ: ಇಂದು 2.68 ಲಕ್ಷ ಹೊಸ ಕೇಸ್ ಪತ್ತೆ

0

ನವದೆಹಲಿ: ಭಾರತದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಶನಿವಾರ 2,68,833  ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, 402 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,68,50,962ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,85,752ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14,17,820ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,22,684 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,49,47,390ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 17,87,457 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 69,90,99,084 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಓಮಿಕ್ರಾನ್ ಸೋಂಕಿತರ ಸಂಖ್ಯೆ 6,041ಕ್ಕೆ ಏರಿಕೆ
ಭಾರತದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಅಧಿಕಗೊಳ್ಳುತ್ತಿದ್ದು, ಈವರೆಗೂ ದೇಶಾದ್ಯಂತ 6,041 ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶಾದ್ಯಂತ ಇರುವ ಒಟ್ಟಾರೆ ಓಮಿಕ್ರಾನ್ ಸೋಂಕಿತರ ಸಂಖ್ಯೆ 6,041ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.