ಮಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಗೆ ಚೈತ್ರಾ ಕುಂದಾಪುರರಿಂದ ವಂಚನೆ ಪ್ರಕರಣ ಸಂಬಂಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಂಗಳೂರಿನಲ್ಲಿ ಮಾತನಾಡಿದ ಅವರು, ಚೈತ್ರಾ ಕುಂದಾಪುರ ಕೇಸ್ ನ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಇದ್ದರೂ ಉಗ್ರ ಶಿಕ್ಷೆ ಆಗಲಿ. ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು ಎಂದು ಹೇಳಿದ್ದಾರೆ.
ಟಿಕೆಟ್ ಕೊಡಿಸುತ್ತೇವೆ ಎಂದು ಹಣ ಪಡೆದಿರುವ ವಿಚಾರವನ್ನ ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಬಿಜೆಪಿಗೆ ಇದರಲ್ಲಿ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟ. ತನಿಖೆ ಆಗಲಿ, ದೊಡ್ಡ ದೊಡ್ಡ ಹೆಸರನ್ನು ಅಪರಾಧಿ ಸ್ಥಾನದಲ್ಲಿ ಇದ್ದವರು ಹೇಳುತ್ತಾರೆ. ಆದರೆ ತನಿಖೆ ಆಗಿ ಅದರ ಸತ್ಯ ಹೊರ ಬರಲಿ ಎಂದು ತಿಳಿಸಿದರು.
ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಪ್ರತಿಕ್ರಿಯಿಸಿ, ಮೈತ್ರಿ ವಿಚಾರ ಪ್ರಾಥಮಿಕ ಹಂತದಲ್ಲಿದೆ. ಮೈತ್ರಿಯಲ್ಲಿ ಕ್ಷೇತ್ರ ಹಂಚಿಕೆ ಅಂತಿಮ ಹಂತ ತಲುಪಿಲ್ಲ. ಮುಂದಿನ ದಿನಗಳಲ್ಲಿ ಪಕ್ಷದ ವರಿಷ್ಠರು ಈ ಬಗ್ಗೆ ಚರ್ಚಿಸಲಿದ್ದಾರೆ. ಮೈತ್ರಿ ಸಮಯದಲ್ಲಿ ನಮ್ಮ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.