ಗುಂಡ್ಲುಪೇಟೆ(ಚಾಮರಾಜನಗರ): ಕೌಟುಂಬಿಕ ಕಲಹದ ಹಿನ್ನಲೆ ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಹೊರ ವಲಯದ ಜಮೀನೊಂದರಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ತಾಯಿ ಮೇಘ(24) ಹಾಗೂ ಮಕ್ಕಳಾದ ಪುನ್ವಿತಾ(6), ಮನ್ವಿತಾ(3) ಮೃತ ದುರ್ದೈವಿಗಳು.
ಪತಿ ಧನಂಜಯ್ ಹಾಗೂ ಅತ್ತೆ ನಿರ್ಮಲಮ್ಮ ಮೃತ ಮೇಘಾಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗುತ್ತಿದ್ದು, ಇದರಿಂದ ಬೇಸತ್ತ ಮೇಘ ತನ್ನ ಎರಡು ಮಕ್ಕಳೊಂದಿಗೆ ನೇಣಿಗೆ ಶರಣಾಗಿದ್ದಾರೆ ಎಂದು ತೆರಕಣಾಂಬಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಎಂಟು ವರ್ಷದ ಹಿಂದೆ ಧನಂಜಯ ಮತ್ತು ಮೇಘ ಅವರ ವಿವಾಹವಾಗಿದ್ದು, ಪ್ರಾರಂಭದ ದಿನಗಳಿಂದಲೂ ಕುಟುಂಬದವರೆಲ್ಲಾ ಸೇರಿ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಮೇಘಳ ಪೋಷಕರು ಆರೋಪಿಸಿದ್ದಾರೆ.
ಮಾಹಿತಿ ಅರಿತ ಕೂಡಲೇ ಡಿವೈಎಸ್ಪಿ ಲಕ್ಷ್ಮಯ್ಯ ಹಾಗೂ ಸರ್ಕಲ್ ಇನ್ಸ್ ಪೆಕ್ಟರ್ ವನರಾಜು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆ ಸಂಬಂಧ ಮೇಘ ಪತಿ ಧನಂಜಯ, ಅತ್ತೆ ನಿರ್ಮಲಮ್ಮ ಹಾಗೂ ಮಾವ ಮಲ್ಲಿಕಾರ್ಜುನ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತೆರಕಣಾಂಬಿ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಈಶ್ವರ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.