ಬೆಂಗಳೂರು: ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರಾ ಕುಂದಾಪುರ ಅವರು ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾಗಲೇ ಬಾಯಲ್ಲಿ ನೊರೆ ಬಂದು ಕುಸಿದು ಬಿದ್ದಿದ್ದರು. ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚೈತ್ರಾ ಅವರಿಗೆ ಪಿಡ್ಸ್ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.
ಹೀಗಾಗಿ ಬಟ್ಟೆ ತೊಳೆಯಲು ಕೊಟ್ಟ ಸಾಬೂನಿನ ನೊರೆಯನ್ನು ಬಾಯಿಗೆ ಹಾಕಿರುವ ಶಂಕೆ ವ್ಯಕ್ತವಾದ ಹಿನ್ನೆಲೆ ಸಿಸಿಬಿ ಕಚೇರಿಯಲ್ಲಿರುವ ವಾಶ್ ರೂಮ್ ಅನ್ನು ಪೊಲೀಸರು ಪರಿಶೀಲನೆ ನಡೆಸಿದ್ದು, ಮುನ್ನೆಚ್ಚರಿಕೆ ಸಲುವಾಗಿ ಚೈತ್ರಾ ಕುಂದಾಪುರ ಅವರ ಆರೋಗ್ಯವನ್ನು ಎಲ್ಲಾ ರೀತಿಯಲ್ಲಿ ತಪಾಸಣೆ ನಡೆಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಅದರಂತೆ, ಬಿಪಿ, ಪಲ್ಸ್ ರೇಟ್ ನಾರ್ಮಲ್ ಇದೆ. ಅದರೂ ಮೂರ್ಛೆ ರೋಗಕ್ಕೆ ಸಂಬಂಧಿಸಿದ ತಪಾಸಣೆಗಳು, ಬಿಪಿ, ಹೃದಯ ಸಂಬಂಧಿ ಚೆಕಪ್, ಉಸಿರಾಟದ ಸಮಸ್ಯೆ ಸೇರಿದಂತೆ ಎಲ್ಲ ರೀತಿಯ ಪರೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ.
ವೈದ್ಯರ ತಪಾಸಣೆ ವೇಳೆ ಪಿಡ್ಸ್ ಅಥವಾ ಮೂರ್ಛೆ ರೋಗಕ್ಕೆ ಸಂಬಂಧಿಸಿದ ಯಾವುದೇ ಕುರುಹು ಕಂಡು ಬಂದಿಲ್ಲ ಎಂದು ತಿಳಿದುಬಂದಿದೆ. ಸದ್ಯ ಇನ್ನೂ ಕೆಲಕಾಲ ಅಸ್ಪತ್ರೆಯಲ್ಲೆ ಚಿಕಿತ್ಸೆ ಕೊಡಿಸಲು ಸಿಸಿಬಿ ಪೊಲೀಸರ ನಿರ್ಧಾರ ಮಾಡಿದ್ದಾರೆ.
ಸದ್ಯ ಚೈತ್ರಾ ಕುಂದಾಪುರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ಬಂದ ತನಿಖಾಧಿಕಾರಿ ಸಿಸಿಬಿ ಕಚೇರಿಗೆ ವಾಪಸ್ ಆಗಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾದ ಬಳಿಕ ಚೈತ್ರಾ ಕುಂದಾಪುರ ಬಾಯಿ ಬಿಡುತ್ತಿಲ್ಲವಂತೆ. ವೈದ್ಯರು ಮಾತಾಡಿಸಿದ್ದಕ್ಕೆ ಸನ್ನೆ ಮೂಲಕ ಮಾತನಾಡಲು ಆಗುತ್ತಿಲ್ಲ ಎಂದು ಹೇಳುತ್ತಿದ್ದಾಳಂತೆ. ಆದರೆ, ಆಕೆಗೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಸದ್ಯ ಚೈತ್ರಾ ಕುಂದಾಪುರ ನಾಟಕಕ್ಕೆ ಸಿಸಿಬಿ ಪೊಲೀಸರು ಕಂಗಾಲಾಗಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.