ಮನೆ ರಾಜ್ಯ ಸಚಿವ ರಾಮಲಿಂಗ ರೆಡ್ಡಿ: ಮುಜರಾಯಿ ಇಲಾಖೆಯ ಪ್ರಮುಖ ದೇವಸ್ಥಾನಗಳಲ್ಲಿ ಪೂಜೆ ಮಾಡಿಸಲು ಆನ್ಲೈನ್ ಮೂಲಕ ಮುಂಗಡವಾಗಿ...

ಸಚಿವ ರಾಮಲಿಂಗ ರೆಡ್ಡಿ: ಮುಜರಾಯಿ ಇಲಾಖೆಯ ಪ್ರಮುಖ ದೇವಸ್ಥಾನಗಳಲ್ಲಿ ಪೂಜೆ ಮಾಡಿಸಲು ಆನ್ಲೈನ್ ಮೂಲಕ ಮುಂಗಡವಾಗಿ ಕಾಯ್ದಿರಿಸುವ ಆಪ್ ಬಿಡುಗಡೆ

0

ಬೆಂಗಳೂರು: ಮುಜರಾಯಿ ಇಲಾಖೆಯ ಪ್ರಮುಖ ದೇವಸ್ಥಾನಗಳಲ್ಲಿ ಪೂಜೆ ಮಾಡಿಸಲು ಆನ್ಲೈನ್ ಮೂಲಕ ಮುಂಗಡವಾಗಿ ಕಾಯ್ದಿರಿಸುವ ಬಿಡುಗಡೆಗೆ ಸರ್ಕಾರ ಮುಂದಾಗಿದೆ.

 ಮುಜರಾಯಿ ಇಲಾಖೆಯ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಸುದ್ದಿಗಾರರಿಗೆ ಈ ಮಾಹಿತಿ ನೀಡಿದರು.

ಆನ್ಲೈನ್ ವ್ಯವಸ್ಥೆ ಆದರೆ ಭಕ್ತರಿಗೆ ಉಪಯೋಗವಾಗಲಿದೆ ಆ ಮೂಲಕ ಕೊಠಡಿಗಳನ್ನು ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗುವುದು ಎಂದು ವಿವರಿಸಿದರು.

ಆರಂಭವಾದ ಬಳಿಕ ದೇವಾಲಯಗಳಿಗೆ ಬರುವ ಭಕ್ತರ ಪ್ರಮಾಣ ಹೆಚ್ಚಿದೆ ‘ಎ’ ಮತ್ತು ‘ಬಿ’ ದರ್ಜೆಯ ದೇವಸ್ಥಾನಗಳಲ್ಲಿ ಸಿ.ಸಿ.ಟಿವಿ ಕ್ಯಾಮರಾ ಕಡ್ಡಾಯವಾಗಿ ಅಳವಡಿಸಬೇಕು. ತಾಯಂದಿರಿಗೆ ಶಿಶು ಆರೈಕೆ ಮಾಡಲು ಹಾಗೂ ಹಾಲು ಉಣಿಸಲು ಪ್ರತ್ಯೇಕ ‘ಅಮ್ಮ ಕೇಂದ್ರ’ ತೆರೆಯಬೇಕು. 65 ವರ್ಷ ದಾಟಿದ ಮಹಿಳೆಯರಿಗೆ ಅಂಗವಿಕಲರಿಗೆ ನೇರ ಮತ್ತು ಸರಾಗವಾಗಿ ದೇವರ ದರ್ಶನ ಪಡೆಯಲು ವ್ಯವಸ್ಥೆ ಮಾಡಬೇಕು. ಎಲ್ಲಾ ದೇವಸ್ಥಾನಗಳಲ್ಲಿ ಕುಡಿಯುವ ನೀರು ಶೌಚಾಲಯ ಸಹಿತ ಮೂಲ ಸೌಲಭ್ಯಗಳಿರಬೇಕು. ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯಬೇಕು. ಆರಂಭಿಕ ಹಂತವಾಗಿ 25 ದೇವಸ್ಥಾನಗಳನ್ನು ಅಭಿವೃದ್ಧಿಪಡಿಸಲು ಮಾಸ್ಟರ್ ಪ್ಲಾನ್ ತಯಾರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ದಿವಾಳಿಗಳ ಸುತ್ತ 100 ಮೀಟರ್ ಸುತ್ತಳತೆಯಲ್ಲಿ ಮದ್ಯ ಸಿಗರೇಟು ಗುಟ್ಕಾ ಹಾಗೂ ಇತರೆ ಮಾದಕ ವಸ್ತುಗಳ ಮಾರಾಟವನ್ನು ಕಡ್ಡಾಯವಾಗಿ ನಿಷೇಧಿಸಿ ಆದೇಶ ಹೊರಡಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಒತ್ತುವರೇ ತಿರುವಿಗೆ ಕ್ರಮ ದೇವಾಲಯಗಳ ಸ್ಥಿರ ಆಸ್ತಿಗಳನ್ನು ಸರ್ವೆ ಮಾಡಬೇಕು ಒತ್ತುವರಿ ಇದ್ದರೆ ತೆರವುಗೊಳಿಸಬೇಕು ಆಸ್ತಿ ದಾಖಲೀಕರಣ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಅರ್ಜಿ ಸಲ್ಲಿಸಿದರೆ ಮಹಿಳೆಯರು ಅರ್ಥಶಾಸ್ತ್ರ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಿಗೆ ಅರ್ಚಕರಾಗಲು ಮಹಿಳೆಯರು ಅರ್ಜಿ ಸಲ್ಲಿಸಿದರೆ ಅವರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಮಲಿಂಗ ರೆಡ್ಡಿ ಹೇಳಿದರು. ತಮಿಳುನಾಡಿನಲ್ಲಿ ಮಹಿಳಾ ಅರ್ಚಕರಿ ಯಾರಿಗೂ ಅವಕಾಶ ನೀಡಿದಂತೆ ಕರ್ನಾಟಕದಲ್ಲೂ ಜಾರಿ ಮಾಡುತ್ತೀರಾ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು ತಸ್ತೀಕ್ ಮೊತ್ತವನ್ನು ನೇರವಾಗಿ ಅರ್ಚಕರ ಖಾತೆಗೆ ಪಾವತಿ ಮಾಡಲು ಕ್ರಮ ವಹಿಸಲಾಗುವುದು ಎಂದರು.