ಮನೆ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ: ಪ್ರತಿ ತಿಂಗಳು ಜಿಲ್ಲೆಗಳಲ್ಲಿ ‘ಜನತಾ ದರ್ಶನ’ ಸೆ. 25ಕ್ಕೆ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ: ಪ್ರತಿ ತಿಂಗಳು ಜಿಲ್ಲೆಗಳಲ್ಲಿ ‘ಜನತಾ ದರ್ಶನ’ ಸೆ. 25ಕ್ಕೆ ಚಾಲನೆ

0

ಪ್ರತಿ ತಿಂಗಳು ಜಿಲ್ಲೆಗಳಲ್ಲಿ ಜನತಾ ದರ್ಶನ, ಸೆ. 25ಕ್ಕೆ ಚಾಲನೆ ಬೆಂಗಳೂರು, ಸೆಪ್ಟೆಂಬರ್ 17; ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಬೆಂಗಳೂರಿಗೆ ಅಲೆಯುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಜಿಲ್ಲೆಗಳಲ್ಲಿ ‘ಜನತಾ ದರ್ಶನ’ ನಡೆಸಲಾಗುತ್ತದೆ.

ಮುಖ್ಯಮಂತ್ರಿಗಳ ಅಪರ ಮುಖ್ಯ, ಕಾರ್ಯದರ್ಶಿಗಳಾದ ಡಾ. ರಜನೀಶ್ ಗೋಯಲ್ ಈ ಕುರಿತು ಟಿಪ್ಪಣಿ ಹೊರಡಿಸಿದ್ದಾರೆ. ಎಲ್ಲಾ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಗಳು/ ಜಿಲ್ಲಾಧಿಕಾರಿಗಳು/ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಕಾಧಿಕಾರಿಗಳು/ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿಗಳಿಗೆ ಈ ಟಿಪ್ಪಣೆ ರವಾನಿಸಲಾಗಿದೆ.

ಜನತಾ ದರ್ಶನದಲ್ಲಿ ಪ್ರತಿ ದೂರನ್ನೂ ಪರಿಹರಿಸಲಾಗುವುದು. ಯೋಗಿ ಭರವಸೆ ರಾಜ್ಯದ ವಿವಿಧ ಭಾಗಗಳಿಂದ ನಾಗರಿಕರು ಬೆಂಗಳೂರಿಗೆ ಆಗಮಿಸಿ ಹಲವಾರು ರೀತಿಯ ಸಮಸ್ಯೆಗಳನ್ನು ಕುರಿತು ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಿದ್ದು, ಸದರಿ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ‘ ಜನತಾ ದರ್ಶನ’ ಕಾರ್ಯಕ್ರಮ ಹಮ್ಮಿಕೊಂಡು ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸುವುದು ಸೂಕ್ತವಾಗಿರುತ್ತದೆ ಎಂದು ಟಿಪ್ಪಣೆ ಹೇಳಿದೆ.

ಸಪ್ಟೆಂಬರ್ 25ಕ್ಕೆ ಚಾಲನೆ; ಮಾನ್ಯ ಮುಖ್ಯಮಂತ್ರಿಗಳು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ದಿನಾಂಕ 25/09/2023ರಂದು ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ಯದಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಶಿಷ್ಟಾಚಾರಕ್ಕೆ ಅನುಗುಣವಾಗಿ ‘ಜನತಾ ದರ್ಶನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ಸೂಚಿಸಿದ್ದಾರೆ.

ರೌಡಿಗಳಿಗೆ ಸುಲಭವಾಗಿ ಜಾಮೀನು ಸಿಗಬಾರದು. ಪೊಲೀಸರಿಗೆ ಸಿ.ಎಂ ಸಿದ್ದರಾಮಯ್ಯ ಖಡಕ್ ಸೂಚನೆ. ಈ ಸಂಬಂಧ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಿಕೊಂಡು, ವ್ಯವಸ್ಥಿತವಾಗಿ ಹಾಗೂ ಜವಾಬ್ದಾರಿಯುತವಾಗಿ ನಡೆಸುವ ಕುರಿತು ಸೂಕ್ತ ಕ್ರಮವಹಿಸಲು ಟಿಪ್ಪಣಿಯಲ್ಲಿ ಸೂಚನೆ ನೀಡಲಾಗಿದೆ.

ಸಂಬಂಧಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಯಾ ಜಿಲ್ಲಾಧಿಕಾರಿಗಳೊಂದಿಗೆ ಜರೂರಾಗಿ ಸಮನ್ವಯ ಸಾಧಿಸಿಕೊಂಡು ಸದರಿ ದಿನದಂದು ನಡೆಯಲಿರುವ ‘ಜನತಾ ದರ್ಶನ’ ಕಾರ್ಯಕ್ರಮಕ್ಕೆ ರೂಪು ರೇಷಗಳನ್ನು ಸಿದ್ಧಪಡಿಸಿಕೊಳ್ಳುವುದು. ಜಿಲ್ಲಾಡಳಿತವು ಆಯಾ ಜಿಲ್ಲೆಯ ಜನರಿಗೆ ‘ಜನತಾ ದರ್ಶನ’ ನಡೆಯುವ ಸ್ಥಳ, ವೇಳೆ ಇತ್ಯಾದಿಗಳನ್ನು ಜಾಹೀರಾತು ಮುಖಾಂತರ ಮುಂಚಿತವಾಗಿಯೇ ತಿಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ನೋಡಿಕೊಳ್ಳತಕ್ಕದ್ದು ಎಂದು ತಿಳಿಸಲಾಗಿದೆ.

ಸದರಿ ದಿನದಂದು ಎಲ್ಲಾ ಜಿಲ್ಲಾ ಮಟ್ಟದ ಹಾಗೂ ಪ್ರತಿ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಹಾಜರಿದ್ದು, ಸಾರ್ವಜನಿಕರಿಂದ ಸ್ವೀಕೃತವಾದ ಎಲ್ಲಾ ಅರ್ಜಿಗಳು ಮನವಿಗಳನ್ನು ಈಗಾಗಲೇ ಚಾಲ್ತಿಯಲ್ಲಿರುವ ಸಾರ್ವಜನಿಕ ಕುಂದು ಕೊರತೆ ನಿವಾರಣಾ ವ್ಯವಸ್ಥೆ IPGRS (Integrated Public Grievance Redressal System) ತಂತ್ರಾಂಶದಲ್ಲಿ ದಾಖಲಿಸುವುದು ಹಾಗೂ ಅರ್ಜಿಗಳ ವಿಲೇವಾರಿಯನ್ನು ನಿರ್ವಹಿಸುವುದು ಎಂದು ಹೇಳಿದೆ.

ಸಂಬಂಧಿಸಿದ ಅರ್ಜಿಗಳನ್ನು, ಬಹಳ ಜಾಗೃತಿಯಿಂದ ಹಾಗೂ ಸಹಾನುಭೂತಿಯಿಂದ ಪರಿಶೀಲಿಸಿ ನಿಗದಿತ ಕಾಲಾವಧಿಯೊಳಗೆ ನಿಯಮಾನುಸಾರ ಪರಿಹಾರೋಪಾಯಗಳನ್ನು ಒದಗಿಸುವ ಕುರಿತು ಅಗತ್ಯ ಕ್ರಮ ವಹಿಸುವುದು ಹಾಗೂ ಮುಂದುವರೆದು ಪ್ರತಿ ಮಾಹೆಯಲ್ಲಿಯೂ ಜಿಲ್ಲಾ ಮಟ್ಟದಲ್ಲಿ ಸದರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳವುದು.

ಜಿಲ್ಲಾಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮೆ ತಮ್ಮ ಜಿಲ್ಲಾ ವ್ಯಾಪ್ತಿಯ ಒಂದು ತಾಲ್ಲೂಕನ್ನು ಆಯ್ಕೆ ಮಾಡಿಕೊಂಡು ತಾಲ್ಲೂಕು ಮಟ್ಟದಲ್ಲಿ ‘ಜನತಾ ದರ್ಶನ’ ಕಾರ್ಯಕ್ರಮವನ್ನು ನಡೆಸುವುದು ಎಂದು ನಿರ್ದೇಶಿಸಲಾಗಿದೆ. ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿ. ಆ. ಸು. ಇ (ಇ-ಆಡಳಿತ) ಜಿಲ್ಲಾ ಇ-ಆಫೀಸ್ ಸಮಾಲೋಚಕರನ್ನು ಈ ಕಾರ್ಯಕ್ಕೆ ಬಳಸಿಕೊಳ್ಳುವುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ನಿರ್ದೇಶಕರ ಕಛೇರಿ, ಬೆಂಗಳೂರು ಇವರನ್ನು ದೂರವಾಣಿ ಸಂಖ್ಯೆ 080-22340369 ಮೂಲಕ ಸಂಪರ್ಕಿಸಲು ಸೂಚಿಸಿದೆ.