ಮನೆ ಸುದ್ದಿ ಜಾಲ ಚಾಮುಂಡಿ ಬೆಟ್ಟದಲ್ಲಿ ಜಯಚಾಮರಾಜೇಂದ್ರ ಒಡೆಯರ್ ಪುತ್ಥಳಿ ಅನಾವರಣ

ಚಾಮುಂಡಿ ಬೆಟ್ಟದಲ್ಲಿ ಜಯಚಾಮರಾಜೇಂದ್ರ ಒಡೆಯರ್ ಪುತ್ಥಳಿ ಅನಾವರಣ

0

ಮೈಸೂರು(Mysuru): ಚಾಮುಂಡಿಬೆಟ್ಟದಲ್ಲಿ ಸ್ಥಾಪಿಸಲಾಗಿರುವ ಜಯಚಾಮರಾಜೇಂದ್ರ ಒಡೆಯರ್(Jayachamarajendra odeyar ) ಪುತ್ಥಳಿಯನ್ನು(Statue) ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್(Pramoda devi Odeyar) ಶುಕ್ರವಾರ ಬೆಳಿಗ್ಗೆ ಅನಾವರಣಗೊಳಿಸಿದರು.

ಬೆಟ್ಟದ ಗ್ರಾಮಸ್ಥರು ಸೇರಿಕೊಂಡು ತಮ್ಮದೇ ಖರ್ಚಿನಲ್ಲಿ ಪುತ್ಥಳಿ ನಿರ್ಮಿಸಿ, ಅನಾವರಣ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಶಿಲ್ಪಿ ಸೂರ್ಯಪ್ರಕಾಶ್ ಅವರು ಮೂರೂವರೆ ಅಡಿ ಎತ್ತರದ ಪುತ್ಥಳಿ ನಿರ್ಮಾಣ ಮಾಡಿದ್ದಾರೆ.

ಈ ಸಂದರ್ಭ ಮಾತನಾಡಿದ ರಾಜವಂಶಸ್ಥೆ ಪ್ರಮೋದಾದೇವಿ ಓಡೆಯರ್, ಚಾಮುಂಡಿ ಬೆಟ್ಟದ ಗ್ರಾಮಸ್ಥರು ಜಯಚಾಮರಾಜೇಂದ್ರ ಒಡೆಯರ್ ಪುತ್ಥಳಿ ನಿರ್ಮಿಸಿರುವುದು ತುಂಬಾ ಸಂತೋಷ. ಈ ಮೂಲಕ ಮಹಾರಾಜರ ಕೊಡುಗೆಗಳನ್ನು ಸ್ಮರಿಸುವ ಕೆಲಸ ಮಾಡಿದ್ದಾರೆ’ ಎಂದು ಹೇಳಿದರು.

ಪುತ್ಥಳಿ ಅನಾವರಣ ಸಮಯದಲ್ಲೇ ಚಾಮುಂಡಿ ಬೆಟ್ಟಕ್ಕೆ ಬಂದಿದ್ದ ಕೃಷಿ ಸಚಿವ ಬಿ.ಸಿ‌.ಪಾಟೀಲ ಮತ್ತು ಶಾಸಕ ಜಿ.ಟಿ.ದೇವೇಗೌಡ ಅವರೂ ಕಾರ್ಯಕ್ರಮದಲ್ಲಿ ಭಾಗಿಯಾದರು.