ಮನೆ ಸುದ್ದಿ ಜಾಲ ದ್ವಿತೀಯ ಪಿಯುಸಿ ಪರೀಕ್ಷೆ: ಚಾಮರಾಜನಗರ 17 ಕೇಂದ್ರಗಳಲ್ಲಿ ಪರೀಕ್ಷೆ ಆರಂಭ

ದ್ವಿತೀಯ ಪಿಯುಸಿ ಪರೀಕ್ಷೆ: ಚಾಮರಾಜನಗರ 17 ಕೇಂದ್ರಗಳಲ್ಲಿ ಪರೀಕ್ಷೆ ಆರಂಭ

0

ಚಾಮರಾಜನಗರ(Chamarajnagar): 2021-22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಜಿಲ್ಲೆಯ 17 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ.

4040 ವಿದ್ಯಾರ್ಥಿಗಳು, 3,925 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 7965 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಪರೀಕ್ಷಾ ಕೊಠಡಿಯೊಳಗೆ ಧಾರ್ಮಿಕ ಉಡುಪು ನಿಷೇಧಿಸಲಾಗಿದ್ದು, ಪರೀಕ್ಷಾ ಕೇಂದ್ರಗಳ ಫಲಕದಲ್ಲಿ ಆದೇಶವನ್ನು ಪ್ರಕಟಿಸಲಾಗಿದೆ.

ಚಾಮರಾಜನಗರ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿಟ್ಟು ಪರೀಕ್ಷಾ ಕೊಠಡಿಯೊಳಗೆ ತೆರಳಿದರು.