ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಏಕದಿನ ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಮೊದಲೆರಡು ಪಂದ್ಯಗಳಿಗೆ ಆಯ್ಕೆ ಮಾಡಲಾದ 15 ಸದಸ್ಯರ ಈ ಬಳಗವನ್ನು ಕೆ ಎಲ್ ರಾಹುಲ್ ಮುನ್ನಡೆಸಲಿದ್ದಾರೆ. ರವಿಚಂದ್ರನ್ ಅಶ್ವಿನ್ ಟೀಮ್ ಇಂಡಿಯಾಗೆ ಮರಳಿದ್ದಾರೆ. ಹಾಗೂ ಏಷ್ಯಾಕಪ್ ಗೆ ಅಚ್ಚರಿಯ ಆಯ್ಕೆ ಆಗಿದ್ದ ತಿಲಕ್ ವರ್ಮಾ ಗೆ ಆಸಿಸ್ ಸರಣಿಯಲ್ಲಿ ಆಡಲು ಅವಕಾಶ ಸಿಕ್ಕಿದೆ. ಮೊದಲ ಎರಡು ಪಂದ್ಯಗಳಿಂದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿದ್ದು, ಮೂರನೇ ಪಂದ್ಯದ ವೇಳೆ ತಂಡವನ್ನು ಸೇರಿಕೊಳ್ಳಲಿದ್ದಾರೆ.
ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ:
ಮೊದಲ ಏಕದಿನ ಪಂದ್ಯ (ಮೊಹಾಲಿ – ಸೆಪ್ಟೆಂಬರ್ 22, 2023)
ಎರಡನೇ ಏಕದಿನ ಪಂದ್ಯ (ಇಂದೋರ್ – ಸೆಪ್ಟೆಂಬರ್ 24, 2023)
ಮೂರನೇ ಏಕದಿನ ಪಂದ್ಯ (ರಾಜ್‌ಕೋಟ್ – ಸೆಪ್ಟೆಂಬರ್ 27, 2023).
ಮೊದಲ ಎರಡು ಏಕದಿನ ಪಂದ್ಯಕ್ಕೆ ಭಾರತ ತಂಡ: ಕೆಎಲ್ ರಾಹುಲ್ (ನಾಯಕ & ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್, ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಅಲೆಕ್ಸ್ ಕ್ಯಾರಿ, ಮಾರ್ನಸ್ ಲಾಬುಶೇನ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ತನ್ವೀರ್ ಸಾಂಘಾ, ಮ್ಯಾಟ್ ಶಾರ್ಟ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಮ್ ಝಂಪಾ.














