ಹೊಳೆನರಸೀಪುರ: ತಾಲೂಕಿನ ಸಿಗರನಹಳ್ಳಿಯಲ್ಲಿ ಮದ್ಯ ಸೇವನೆ ಸಂಬಂಧ ನಡೆದ ಪಂದ್ಯದಲ್ಲಿ ತಿಮ್ಮೇಗೌಡ (60) ಎಂಬಾತ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಸಿಗರನಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ಕೃಷ್ಣೇಗೌಡ ಎಂಬುವರು ನೀಡಿದ ಮದ್ಯವನ್ನು ದೇವರಾಜು, ತಿಮ್ಮೇಗೌಡರ ಜತೆ ಅರ್ಧ ಗಂಟೆಯಲ್ಲಿ 90 ಎಂಎಲ್ನ 10 ಪ್ಯಾಕೆಟ್ ಮದ್ಯ ಸೇವನೆಗೆ ಚಾಲೆಂಜ್ ಮಾಡಿದ್ದು, ತಿಮ್ಮೇಗೌಡ 90 ಎಂಎಲ್ ನ 10 ಪ್ಯಾಕೆಟ್ ಮದ್ಯ ಸೇವಿಸಿದ ಅರ್ಧ ಗಂಟೆ ನಂತರ ರಕ್ತವಾಂತಿ ಮಾಡಿಕೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.
ತಿಮ್ಮೇಗೌಡರನ್ನು ಗ್ರಾಮದ ನಾಲ್ಕಾರು ಮಂದಿ ಎತ್ತಿಕೊಂಡು ಹೋಗಿ ಮನೆಯಲ್ಲಿ ಮಲಗಿಸಿದ್ದು, ಮನೆಯಲ್ಲಿ ಯಾರೂ ಇಲ್ಲದ ಕಾರಣ ನಿತ್ರಾಣಗೊಂಡಿದ್ದ ತಿಮ್ಮೇಗೌಡ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಮೃತರ ಪುತ್ರಿ ದೂರು ದಾಖಲಿಸಿದ್ದು, ದೇವರಾಜ ಹಾಗೂ ಕೃಷ್ಣೇಗೌಡರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
ತಿಮ್ಮೇಗೌಡರ ಮೃತದೇಹವನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.