ಐಸಿಸಿ ನೂತನ ಏಕದಿನ ಬೌಲರ್ಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನ ಅಲಂಕರಿಸಿರುವುದು ವಿಶೇಷ.
ಏಷ್ಯಾಕಪ್ ಫೈನಲ್ ನಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಸಿರಾಜ್ 7 ಓವರ್ ಗಳಲ್ಲಿ 21 ರನ್ ನೀಡಿ 6 ವಿಕೆಟ್ ಕಬಳಿಸಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ 8 ಸ್ಥಾನ ಮೇಲೇರಿದ್ದಾರೆ.
ಅಂದರೆ ಕಳೆದ ಬಾರಿಯ ಶ್ರೇಯಾಂಕ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ 9ನೇ ಸ್ಥಾನದಲ್ಲಿದ್ದರು. ಇದೀಗ ಏಕಾಏಕಿ ಮೇಲೇರಿ ಅಗ್ರಸ್ಥಾನಕ್ಕೆ ತಲುಪಿರುವುದು ವಿಶೇಷ. ಅದರಂತೆ ಪ್ರಸ್ತುತ ಏಕದಿನ ಬೌಲರ್ ಗಳ ಶ್ರೇಯಾಂಕ ಪಟ್ಟಿಯಲ್ಲಿ ಟಾಪ್-10 ಸ್ಥಾನ ಅಲಂಕರಿಸಿರುವ ಬೌಲರ್ ಗಳ ಪಟ್ಟಿ ಈ ಕೆಳಗಿನಂತಿದೆ.
ಮೊಹಮ್ಮದ್ ಸಿರಾಜ್ (ಭಾರತ): ಕಳೆದ ಶ್ರೇಯಾಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದ ಸಿರಾಜ್ ಈ ಬಾರಿ 8 ಸ್ಥಾನ ಜಿಗಿತ ಕಂಡಿದ್ದಾರೆ. ಈ ಮೂಲಕ ಒಟ್ಟು 694 ರೇಟಿಂಗ್ ಪಡೆದು ಅಗ್ರಸ್ಥಾನ ಅಲಂಕರಿಸಿದ್ದಾರೆ.
ಜೋಶ್ ಹ್ಯಾಝಲ್ ವುಡ್ (ಆಸ್ಟ್ರೇಲಿಯಾ): ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ವೇಗಿ ಹ್ಯಾಝಲ್ವುಡ್ ಈ ಬಾರಿ ಒಟ್ಟು 678 ರೇಟಿಂಗ್ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ.
ಟ್ರೆಂಟ್ ಬೌಲ್ಟ್ (ನ್ಯೂಝಿಲೆಂಡ್): ಕಿವೀಸ್ ವೇಗಿ ಟ್ರೆಂಟ್ ಬೌಲ್ಟ್ ಈ ಬಾರಿ ಒಂದು ಸ್ಥಾನ ಕುಸಿತ ಕಂಡಿದ್ದು, ಒಟ್ಟು 677 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ಮುಜೀಬ್ ಉರ್ ರೆಹಮಾನ್ (ಅಫ್ಘಾನಿಸ್ತಾನ್): ಅಫ್ಘಾನ್ ಸ್ಪಿನ್ನರ್ ಮುಜೀಬ್ ಒಟ್ಟು 657 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ರಶೀದ್ ಖಾನ್ (ಅಫ್ಘಾನಿಸ್ತಾನ್): ಅಫ್ಘಾನಿಸ್ತಾನದ ಸ್ಪಿನ್ ಮಾಂತ್ರಿಕ ರಶೀದ್ ಖಾನ್ 655 ಅಂಕಗಳೊಂದಿಗೆ 5ನೇ ಸ್ಥಾನ ಅಲಂಕರಿಸಿದ್ದಾರೆ.
ಮಿಚೆಲ್ ಸ್ಟಾರ್ಕ್ (ಆಸ್ಟ್ರೇಲಿಯಾ): ಕಳೆದ ಬಾರಿ 3ನೇ ಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ವೇಗಿ ಈ ಬಾರಿ 652 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದ್ದಾರೆ.
ಮ್ಯಾಟ್ ಹೆನ್ರಿ (ನ್ಯೂಝಿಲೆಂಡ್): ಕಿವೀಸ್ ತಂಡದ ವೇಗಿ ಮ್ಯಾಟ್ ಹೆನ್ರಿ ಈ ಬಾರಿ ಒಂದು ಸ್ಥಾನ ಜಿಗಿತ ಕಂಡಿದ್ದು, ಒಟ್ಟು 645 ಅಂಕಗಳೊಂದಿಗೆ 7ನೇ ಸ್ಥಾನ ಅಲಂಕರಿಸಿದ್ದಾರೆ.
ಆ್ಯಡಂ ಝಂಪಾ (ಆಸ್ಟ್ರೇಲಿಯಾ): ಸ್ಪಿನ್ನರ್ ಆ್ಯಡಂ ಝಂಪಾ ಒಟ್ಟು 642 ಅಂಕಗಳೊಂದಿಗೆ ಈ ಬಾರಿ 8ನೇ ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕುಲ್ದೀಪ್ ಯಾದವ್ (ಭಾರತ): ಟೀಮ್ ಇಂಡಿಯಾ ಸ್ಪಿನ್ನರ್ ಕುಲ್ದೀಪ್ ಯಾದವ್ ಈ ಬಾರಿ 3 ಸ್ಥಾನ ಕುಸಿತ ಕಂಡಿದ್ದು, 638 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದ್ದಾರೆ.
ಶಾಹೀನ್ ಅಫ್ರಿದಿ (ಪಾಕಿಸ್ತಾನ್): ಪಾಕ್ ತಂಡದ ಎಡಗೈ ವೇಗಿ ಶಾಹೀನ್ ಅಫ್ರಿದಿ ಒಟ್ಟು 632 ಅಂಕಗಳೊಂದಿಗೆ ಟಾಪ್-10 ನಲ್ಲಿ ಕೊನೆಯ ಸ್ಥಾನ ಅಲಂಕರಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.