ಮನೆ ರಾಜ್ಯ ಬೈಕ್’ಗೆ ಟ್ಯಾಂಕರ್ ಡಿಕ್ಕಿ:  ವೈದ್ಯಕೀಯ ವಿದ್ಯಾರ್ಥಿ ಸಾವು

ಬೈಕ್’ಗೆ ಟ್ಯಾಂಕರ್ ಡಿಕ್ಕಿ:  ವೈದ್ಯಕೀಯ ವಿದ್ಯಾರ್ಥಿ ಸಾವು

0

ಮಡಿಕೇರಿ: ಹಾಲಿನ ಟ್ಯಾಂಕರ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಮಡಿಕೇರಿ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿ ಮೃತಪಟ್ಟು, ಮತ್ತೋರ್ವ ತೀವ್ರವಾಗಿ ಗಾಯಗೊಂಡಿರುವ ಘಟನೆ ಕಾಟಕೇರಿ ಬಳಿ ನಡೆದಿದೆ.

ಉಡುಪಿ ಮೂಲದ ವಿಜೇಶ್ ಎಂಬಾತನೇ ಮೃತ ದುರ್ದೈವಿಯಾಗಿದ್ದಾನೆ. ಬುಧವಾರ ಸಂಜೆ ಉಡುಪಿಯಿಂದ ವಿಜೇಶ್ ಮತ್ತು ಶಿವಾನಂದ್ ಬೈಕಿನಲ್ಲಿ ಮಡಿಕೇರಿ ಕಡೆಗೆ ಆಗಮಿಸುತ್ತಿದ್ದರು. ಈ ವೇಳೆ ಕಾಟಕೇರಿ ಬಳಿ ಮಡಿಕೇರಿಯಿಂದ ಸುಳ್ಯಾದ ಕಡೆಗೆ ತೆರಳುತ್ತಿದ್ದ ಬಹುಚಕ್ರದ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆಯಿತು. ಪರಿಣಾಮ ಬೈಕ್ ಸವಾರ ವಿಜೇಶ್ ಮೃತಪಟ್ಟಿದ್ದು, ಹಿಂಬದಿ ಸವಾರ ಶಿವಾನಂದ್ ಅವರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಲಾರಿ ಸಹಿತ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.