ಮನೆ ರಾಜ್ಯ ಸಿಸಿಬಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯ ಬಂಧ‌ನ

ಸಿಸಿಬಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯ ಬಂಧ‌ನ

0

ಮಂಗಳೂರು(ದಕ್ಷಿಣ ಕನ್ನಡ): ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ಸುಮಾರು 7 ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು

ಫೈಸಲ್‌ನಗರದ ತಲ್ಲತ್, ಪ್ರಾಯ(39) ಎಂದು ಗುರುತಿಸಲಾಗಿದೆ.

2004 ರಲ್ಲಿ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದರು. ನಂತರ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ, ಮುಂಬೈ ಮುಂತಾದ ಕಡೆಗಳಲ್ಲಿ ಹಲ್ಲೆ, ಜೀವ ಬೆದರಿಕೆ, ಹಫ್ತಾ ವಸೂಲಿ, ದರೋಡೆ, ಕೊಲೆ ಯತ್ನ, ಕೊಲೆ, ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ, ಅಪಹರಣ ಹೀಗೆ ಒಟ್ಟು 28 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾರೆ.

ಆರೋಪಿ ಪತ್ತೆ ಕಾರ್ಯವನ್ನು  ಮಂಗಳೂರು ಮಾನ್ಯ ಪೊಲೀಸ್ ಆಯುಕ್ತರವರಾದ ಅನುಪಮ್ ಅಗರ್ ವಾಲ್, ಐ ಪಿ ಎಸ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಸಿಬಿ ಸಿಬ್ಬಂದಿಯವರು  ಪಾಲ್ಗೊಂಡಿದ್ದರು.