ಶಿವಮೊಗ್ಗ: ಹಳೆ ದ್ವೇಷದ ಹಿನ್ನೆಲೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಐದು ಮಂದಿಗೆ ಚಾಕು ಇರಿದಿರುವ ಘಟನೆ ಶಿವಮೊಗ್ಗದ ಆಲ್ಕೊಳ ಸರ್ಕಲ್ ಸಮೀಪ ಎಲ್ ಐಸಿ ಕಚೇರಿ ಬಳಿ ಗುರುವಾರ ಮಧ್ಯರಾತ್ರಿ ನಡೆದಿದೆ.
ಪವನ್ ಮತ್ತು ಕಿರಣ್ ಎಂಬ ಸ್ನೇಹಿತರ ಮಧ್ಯೆ ವೈಷಮ್ಯವಿತ್ತು. ಇದೆ ವಿಚಾರವಾಗಿ ಕಳೆದ ರಾತ್ರಿ ನೇತಾಜಿ ಸರ್ಕಲ್ ನಲ್ಲಿ ಗಲಾಟೆಯಾಗಿದೆ. ಇದೆ ವೇಳೆ ಪವನ್ ಮತ್ತು ಆತನ ಜೊತೆಗಿದ್ದವರು, ಕಿರಣ್ ಮತ್ತು ಆತನ ಸ್ನೇಹಿತರ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಗಾಯಾಳುಗಳನ್ನು ಕೂಡಲೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು.
ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Saval TV on YouTube