ಮನೆ ಕ್ರೀಡೆ ಇಂದು ಭಾರತ-ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ 

ಇಂದು ಭಾರತ-ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ 

0

ಭಾರತ ಕ್ರಿಕೆಟ್ ತಂಡ ಹಾಗೂ ಆಸ್ಟ್ರೇಲಿಯಾ  ನಡುವಣ ಮೂರು ಪಂದ್ಯಗಳ ಏಕದಿನ ಸರಣಿಗೆ ಇಂದು ಚಾಲನೆ ಸಿಗಲಿದೆ.

ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಮೊದಲ ಏಕದಿನ ಪಂದ್ಯ ಆಯೋಜಿಸಲಾಗಿದೆ. ಮೊದಲ ಎರಡು ಏಕದಿನ ಪಂದ್ಯದಿಂದ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಕೆ ಎಲ್ ರಾಹುಲ್ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.

ಭಾರತ-ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ ಸ್ಪೋರ್ಟ್ಸ್ 18 ಇಂಗ್ಲಿಷ್ ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೂ ಪಂದ್ಯವನ್ನು JioCinema ದಲ್ಲಿ ಉಚಿತವಾಗಿ ವೀಕ್ಷಿಸಬಹುದು. ಮಧ್ಯಾಹ್ನ 1:00 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದ್ದು, 1:30ಕ್ಕೆ ಪಂದ್ಯ ಶುರುವಾಗಲಿದೆ. 

ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್, ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಅಲೆಕ್ಸ್ ಕ್ಯಾರಿ, ಮಾರ್ನಸ್ ಲಾಬುಶೇನ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ತನ್ವೀರ್ ಸಾಂಘಾ, ಮ್ಯಾಟ್ ಶಾರ್ಟ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಮ್ ಝಂಪಾ.