ಮೈಸೂರು: ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ನಮಗೆ ಮುಖ್ಯ. ಈ ಕುರಿತು ಇಂದು ಕ್ಯಾಬಿನೆಟ್ ಸಭೆ ನಡೆಸುತ್ತೇವೆ. ಸಭೆಯಲ್ಲಿ ಸರ್ಕಾರ ಒಂದು ತೀರ್ಮಾನಕ್ಕೆ ಬರತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ. ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಬೇಕು. ಲೋಕಸಭೆ ಚುನಾವಣೆ ಕಾರಣದಿಂದ ಬಿಜೆಪಿ ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದರು.
ನಿಫಾ ವೈರಸ್ ರಾಜ್ಯದಲ್ಲಿ ಪತ್ತೆಯಾಗಿಲ್ಲ: ನೆರೆ ರಾಜ್ಯ ಕೇರಳದಲ್ಲಿಯಯೂ ನಿಫಾ ವೈರಸ್ ಸೆಪ್ಟಂಬರ್ 15 ರಿಂದ ಇಲ್ಲಿಯವರೆಗೆ ವರದಿಯಾಗಿಲ್ಲ. ರಾಜ್ಯದಲ್ಲಿ ನಿಫಾ ವೈರಸ್ ಪತ್ತೆಯಾಗಿಲ್ಲ. ಜನರು ಆತಂಕ ಪಡುವ ಅಗತ್ಯವಿಲ್ಲ. ಈಗಾಗಲೇ ರಾಜ್ಯದಲ್ಲಿ ವೈರಸ್ ಹರಡದಂತೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ನಿಫಾ ವೈರಸ್ ಕಾಣಿಸಿಕೊಳ್ಳುವ ಸಾಧ್ಯತೆ ಕಡಿಮೆಯಿದೆ ಎಂದು ಹೇಳಿದರು.