ಮನೆ ಸುದ್ದಿ ಜಾಲ ಇಂದು ನೇರಳೆ ಮಾರ್ಗದ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತ

ಇಂದು ನೇರಳೆ ಮಾರ್ಗದ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತ

0

ಬೆಂಗಳೂರು (Bengaluru)- ನಮ್ಮ ಮೆಟ್ರೋ (Namma Metro) ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೂ (Metro Station) ನಾಳೆ ರಾತ್ರಿ 9-30 ಗಂಟೆಯಿಂದ ತಾತ್ಕಾಲಿಕವಾಗಿ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗುತ್ತಿದೆ.
ಈ ಅವಧಿಯಲ್ಲಿ ಎಂ. ಜಿ. ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ ಎಂದು ಬಿಎಂಆರ್ ಸಿಎಲ್ ಹೇಳಿದೆ.
ನಾಳೆ ರಾತ್ರಿ 9-30 ಗಂಟೆಯಿಂದ ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣಗಳ ಮಾರ್ಗದಲ್ಲಿ ಸಿವಿಲ್ ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ರೈಲು ಸೇವೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದ್ದು, ಭಾನುವಾರದಂದು ಎಂದಿನಂತೆ ಬೆಳಿಗ್ಗೆ 7 ಗಂಟೆಯಿಂದ ವೇಳಾಪಟ್ಟಿ ಪ್ರಕಾರ ರೈಲು ಸೇವೆ ಪುನರಾರಂಭಗೊಳ್ಳಲಿದೆ.
ಹಸಿರು ಮಾರ್ಗದ  ಮೆಟ್ರೋ ರೈಲು ಸೇವೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್ ಸಿಎಲ್  ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.