ಬೆಂಗಳೂರು: ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಖಂಡಿಸಿ ಇಂದು ಮಂಡ್ಯ ಮತ್ತು ಬೆಂಗಳೂರಿನಲ್ಲಿ ವಿವಿಧ ರೈತ ಮತ್ತು ಕನ್ನಡಪರ ಸಂಘಟನೆಗಳು ಪ್ರತಿಭಟನೆಗಳು ನಡೆಸಿದ್ದು, ಈ ನಡವೆ ಸೆ.26 ರಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ.
ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಸೆಪ್ಟೆಂಬರ್ 26ರಂದು ಬೆಂಗಳೂರು ನಗರ ಬಂದ್ ಗೆ ಕರೆ ನೀಡಿರುವುದಾಗಿ ಫ್ರೀಡಂಪಾರ್ಕ್ ನಲ್ಲಿ ಕಬ್ಬುಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಘೋಷಣೆ ಮಾಡಿದ್ದಾರೆ.
ಸೆಪ್ಟಂಬರ್ 26 ಮಂಗಳವಾರದಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಟೌನ್ ಹಾಲ್ನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಬೇಕು. ಇದು ನಮ್ಮ ಬಂದ್ ಅಲ್ಲ, ಬೆಂಗಳೂರಿನ ನಾಗರಿಕರ ಬಂದ್. ಫಿಲ್ಮ್ ಛೇಂಬರ್, ಐಟಿ ಕಂಪನಿಗಳು ಬೆಂಬಲ ಕೊಡಬೇಕು. ಸರ್ಕಾರಕ್ಕೆ ಒತ್ತಾಯ ವಿಶೇಷವಾದ ವಿಧಾನಮಂಡಲದ ಅಧಿವೇಶನ ಕರೆಯಬೇಕು ಎಂದು ಕುರುಬೂರು ಶಾಂತಕುಮಾರ್ ತಿಳಿಸಿದರು.
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
ಯಾಕೆ ಮೇ 8ನ್ನ ವಿಶ್ವ ರೆಡ್ ಕ್ರಾಸ್ ದಿನ ಎಂದು ಆಚರಿಸಲಾಗುತ್ತದೆ
ಬೆಂಗಳೂರಿನಲ್ಲಿ ಭೂಕುಸಿತ
ಸುನಿತಾ ಜೊತೆ ಗಗನಕ್ಕೇರಿದ ಭಗವದ್ಗೀತೆ, ಗಣೇಶ ಮೂರ್ತಿ..!
ಮೈಸೂರಿನ ಹೆಬ್ಬಾಳ್ ಕೆರೆಯಲ್ಲಿ ಮೀನುಗಳ ಮಾರಣಹೋಮ….
ಸುಳ್ಳು ಮಾಹಿತಿಯನ್ನ ಸ್ಪಷ್ಟಪಡಿಸಿದ ಆರೋಗ್ಯ ಇಲಾಖೆ..
ಹನುಮ ಕೇಸರಿಯಾದ ಕಥೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.