ವೆಸ್ಟ್ ಇಂಡೀಸ್ ಮತ್ತು ಯುಎಸ್ಎಯ ಜಂಟಿ ಆತಿಥ್ಯದಲ್ಲಿ ನಡೆಯಲ್ಲಿರುವ 2024 ರ ಟಿ20 ವಿಶ್ವಕಪ್ ಮುಂದಿನ ವರ್ಷದ ಜೂನ್ 4 ರಿಂದ ಆರಂಭವಾಗಲಿದ್ದು, ಜೂನ್ 30 ರಂದು ಫೈನಲ್ ಪಂದ್ಯ ನಡೆಯಲಿದೆ.
ಇದೀಗ ಈ ವಿಶ್ವಕಪ್ ನ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿರುವ ಐಸಿಸಿ, ಈ ಚುಟುಕು ವಿಶ್ವ ಸಮರ ಯಾವ್ಯಾವ ಸ್ಥಳಗಳಲ್ಲಿ ನಡೆಯಲ್ಲಿದೆ ಎಂಬ ಮಾಹಿತಿಯನ್ನು ಹಂಚಿಕೊಂಡಿದೆ.
ಐಸಿಸಿ ಬಿಡುಗಡೆ ಮಾಡಿರುವ ಅಧಿಕೃತ ಹೇಳಿಕೆಯ ಪ್ರಮುಖರ ಮುಂದಿನ ವರ್ಷ ನಡೆಯಲ್ಲಿರುವ ಟಿ20 ವಿಶ್ವಕಪ್ ಅನ್ನು 10 ಸ್ಥಳಗಳಲ್ಲಿ ಆಡಿಸಲು ನಿರ್ಧರಿಸಲಾಗಿದೆ. ಇದರಲ್ಲಿ 7 ಸ್ಥಳಗಳು ವೆಸ್ಟ್ ಇಂಡೀಸ್ ಗೆ ಸೇರಿದ್ದರೆ, ಇನ್ನುಳಿದ 3 ಸ್ಥಳಗಳು ಅಮೆರಿಕಾಕ್ಕೆ ಸೇರಿವೆ.
ಐಸಿಸಿ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಆಂಟಿಗುವಾ ಮತ್ತು ಬಾರ್ಬುಡಾ, ಬಾರ್ಬಡೋಸ್, ಡೊಮಿನಿಕಾ, ಗಯಾನಾ, ಸೇಂಟ್ ಲೂಸಿಯಾ, ಟ್ರಿನಿಡಾಡ್ ಮತ್ತು ಟೊಬಾಗೊ ಮತ್ತು ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್ ಕೆರಿಬಿಯನ್ ರಾಷ್ಟ್ರಗಳಿಂದ ಆಯ್ಕೆಯಾದ ಏಳು ಸ್ಥಳಗಳಾಗಿದ್ದರೆ, ಡಲ್ಲಾಸ್ ನ ಗ್ರ್ಯಾಂಡ್ ಪ್ರೈರೀ, ಫ್ಲೋರಿಡಾದ ಬ್ರೋವರ್ಡ್ ಕೌಂಟಿ ಮತ್ತು ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಯುಎಸ್ಎ ಇಂದ ಆಯ್ಕೆಯಾಗಿರುವ ಮೂರು ಸ್ಥಳಗಳಾಗಿವೆ.
20 ತಂಡಗಳು 4 ಗುಂಪುಗಳು ಮತ್ತು 1 ಟ್ರೋಫಿ
ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಭಾಗವಹಿಸಲಿವೆ. ಈ 20 ತಂಡಗಳನ್ನು ತಲಾ 5 ತಂಡಗಳ 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಎಲ್ಲಾ ನಾಲ್ಕು ಗುಂಪುಗಳಿಂದ ಅಗ್ರ 2 ತಂಡಗಳು ಸೂಪರ್ 8 ಗೆ ಅರ್ಹತೆ ಪಡೆಯುತ್ತವೆ. ಸೂಪರ್ 8 ಸುತ್ತಿಗೆ 4 ತಂಡಗಳನ್ನು ತಲಾ 4ರಂತೆ 2 ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಎರಡೂ ಗುಂಪಿನ ಅಗ್ರ 2 ತಂಡಗಳು ಸೆಮಿಫೈನಲ್ ಗೆ ಅರ್ಹತೆ ಪಡೆಯಲಿವೆ.
ವಿಶೇಷವೆಂದರೆ ಈ ಟೂರ್ನಿಯಲ್ಲಿ ನ್ಯೂಯಾರ್ಕ್ ನಿಂದ ಅನತಿ ದೂರದಲ್ಲಿರುವ ಐಸೆನ್ ಹೋವರ್ ಪಾರ್ಕ್ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.