ಮನೆ ಕ್ರೀಡೆ ಇಂದು ಭಾರತ-ಆಸ್ಟ್ರೇಲಿಯಾ ದ್ವಿತೀಯ ಏಕದಿನ ಪಂದ್ಯ

ಇಂದು ಭಾರತ-ಆಸ್ಟ್ರೇಲಿಯಾ ದ್ವಿತೀಯ ಏಕದಿನ ಪಂದ್ಯ

0

ಇಂದೋರ್ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ದ್ವಿತೀಯ ಏಕದಿನ ಪಂದ್ಯ ನಡೆಯಲಿದೆ. ಭಾರತ 1-0 ಅಂತರದಿಂದ ಸರಣಿ ಮುನ್ನಡೆ ಪಡೆದುಕೊಂಡಿದೆ, ಸರಣಿ ಸಮಬಲ ಸಾಧಿಸಲು ಆಸಿಸ್ ತಂಡ ಚಿಂತಿಸುತ್ತಿದ್ದರೆ, ರಾಹುಲ್ ಪಂದ್ಯ ಗೆದ್ದು ಸರಣಿ ವಶಪಡಿಸಿಕೊಳ್ಳುವ ಲೆಕ್ಕಾಚಾರದಲ್ಲಿದ್ದಾರೆ.

Join Our Whatsapp Group

ಇಂದಿನ ಪಂದ್ಯ ಮಧ್ಯಹ್ನ 1:30ಕ್ಕೆ ಆರಂಭವಾಗಲಿದೆ. ಪಂದ್ಯದ ನೇರ ಪ್ರಸಾರ ಸ್ಪೋರ್ಟ್ಸ್ 18 ಮತ್ತು ಜಿಯೋ ಸಿನಿಮಾದಲ್ಲಿ ಲಭ್ಯವಿರಲಿದೆ. ಇತ್ತ ಕಾಂಗರೂ ಪಡೆ ಸರಣಿ ವಶಪಡಿಸಿಕೊಳ್ಳಬೇಕಾದರೆ ಉಳಿದಿರುವ ಎರಡೂ ಪಂದ್ಯವನ್ನು ಗೆಲ್ಲಲೇ ಬೇಕಿದೆ.


ಭಾರತ ತಂಡ: ಶುಭಮನ್ ಗಿಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ತಿಲಕ್ ವರ್ಮಾ/ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ/ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.


ಆಸ್ಟ್ರೇಲಿಯಾ ತಂಡ : ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ, ಮಾರ್ಕಸ್ ಸ್ಟೊಯ್ನಿಸ್, ಸೀನ್ ಅಬಾಟ್, ಪ್ಯಾಟ್ ಕಮಿನ್ಸ್, ಜೋಶ್ ಹ್ಯಾಜಲ್ವುಡ್, ಆಡಮ್ ಝಂಪಾ.