ಮನೆ ರಾಜ್ಯ ರಾಜ್ಯದಲ್ಲಿ ಮತ್ತೆ ಕೊರೊನಾ ಹೆಚ್ಚಳ: 139 ಮಂದಿಗೆ ಪಾಸಿಟಿವ್‌

ರಾಜ್ಯದಲ್ಲಿ ಮತ್ತೆ ಕೊರೊನಾ ಹೆಚ್ಚಳ: 139 ಮಂದಿಗೆ ಪಾಸಿಟಿವ್‌

0

ಬೆಂಗಳೂರು, (Bengaluru)-ರಾಜ್ಯದಲ್ಲಿ ಮತ್ತೆ ಕೊರೊನಾ (Corona) ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 139 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,46,874ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 132 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,82,879ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 55 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,05096ಕ್ಕೆ ಏರಿಕೆಯಾಗಿದೆ. ಇನ್ನು 1679 ಸಕ್ರಿಯ ಪ್ರಕರಣಗಳಿವೆ. ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 40057 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.