ಮಂಡ್ಯ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕೆಎಸ್ ಆರ್ ಟಿಸಿ ಬಸ್, ಕಾರು ನಡುವೆ ಢಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಹಾಸನದಿಂದ ಬಂದ ಪಾಳಿ ಕಾರು ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ 4 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Saval TV on YouTube