ಮನೆ ಅಪರಾಧ ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದವನ ಬಂಧನ

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದವನ ಬಂಧನ

0

ಮಂಗಳೂರು(ದಕ್ಷಿಣ ಕನ್ನಡ): “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು  ಮಾರಾಟ ಮಾಡುತ್ತಿದ್ದವನನ್ನು ಬಂಧಿಸಿದ್ದಾರೆ.

Join Our Whatsapp Group

ಮಂಗಳೂರು ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಯುವಕನೊಬ್ಬ ಅಕ್ರಮವಾಗಿ MDMA ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ  MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ್ದ ಲುಕುಮಾನುಲ್ ಹಕೀಂ @  ಹಕೀಂ(22) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ಒಟ್ಟು 25 ಗ್ರಾಂ ತೂಕದ ರೂ. 1,25,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ ಗಳು-1, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 1,60,000/-ಆಗಬಹುದು. ಆರೋಪಿಯ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈತನು ಮಂಗಳೂರು ನಗರದ ಕಾಲೇಜುವೊಂದರ ಪದವಿ ವಿದ್ಯಾರ್ಥಿಯಾಗಿರುತ್ತಾನೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.      

ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ನಡೆಸಿದ್ದಾರೆ.