ಮೈಸೂರು: ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮೈಸೂರಿನ ಎಲ್ಲ ಶಾಲಾ-ಕಾಲೇಜುಗಳಿಗೆ ಸೆ.29ರಂದು ರಜೆ ಘೋಷಿಸಲಾಗಿದೆ.
ಕರ್ನಾಟಕ ಬಂದ್ ಇರುವ ಹಿನ್ನಲೆಯಲ್ಲಿ ಶಾಲಾ- ಕಾಲೇಜು ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಒಂದು ದಿನ ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ, ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ಆದೇಶಿಸಿದ್ದಾರೆ.