ಮನೆ ರಾಜ್ಯ ಮಾದಕ ವಸ್ತುಗಳ ಮಾರಾಟ, ಸೇವನೆ ತಡೆಗಟ್ಟಲು ಸಮುದಾಯದ ಸಹಕಾರ ಅಗತ್ಯ: ಕೆ.ವಿ ಶ್ರೀಧರ್

ಮಾದಕ ವಸ್ತುಗಳ ಮಾರಾಟ, ಸೇವನೆ ತಡೆಗಟ್ಟಲು ಸಮುದಾಯದ ಸಹಕಾರ ಅಗತ್ಯ: ಕೆ.ವಿ ಶ್ರೀಧರ್

0

ಪಿರಿಯಾಪಟ್ಟಣ: ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ತಡೆಗಟ್ಟಲು ಸಮುದಾಯದ ಸಹಕಾರ ಅತ್ಯಗತ್ಯವಿದೆ ಎಂದು ಇನ್ಸ್ಪೆಕ್ಟರ್ ಕೆ.ವಿ ಶ್ರೀಧರ್ ತಿಳಿಸಿದರು.

Join Our Whatsapp Group

ಪಟ್ಟಣದ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಲಯನ್ಸ್ ಕ್ಲಬ್ ಮತ್ತು ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಮಾದಕ ವ್ಯಸನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

 ಶಾಲಾ ಕಾಲೇಜು ಸುತ್ತಮುತ್ತ ಅನುಮಾನಾಸ್ಪದ ವ್ಯಕ್ತಿಗಳು ಹಾಗು ಗಾಂಜಾ ಅಫೀಮು ಮತ್ತಿತರ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ವ್ಯಕ್ತಿಗಳು ಕಂಡಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ ಅಮಾಯಕಾರಿ ಜಾಲದಲ್ಲಿ ಬೀಳದಂತೆ ತಡೆಯಲು ಸಹಕರಿಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಮಂಜುನಾಥ್ ಸಿಂಗ್ ಮಾತಾನಾಡಿ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು,

ದೇಶದ ಆರೋಗ್ಯಕಾರಿ ಸಮಾಜಕ್ಕೆ ಬಹುದೊಡ್ಡ ಪಿಡುಗಾಗಿರುವ ಮಾದಕ ವಸ್ತು ಜಾಲಕ್ಕೆ ಯುವಕರು ಬೀಳದಂತೆ ಎಚ್ಚರಿಕೆ ವಹಿಸಬೇಕು ಪೋಷಕರು ಸಹ ಈ ಬಗ್ಗೆ ಸದಾ ನಿಗಾ ವಹಿಸಬೇಕು ಎಂದರು.

ಸರ್ಕಾರಿ ಐಟಿಐ ಕಾಲೇಜು ಪ್ರಭಾರ ಪ್ರಾಂಶುಪಾಲರಾದ ಸೋಮಶೇಖರ್ ಮಾತನಾಡಿ ನಗರ ಪ್ರದೇಶಕ್ಕೆ ಸಿಮಿತವಾಗಿದ್ದ ಮಾದಕ ವಸ್ತು ಸೇವನೆ ಪಿಡುಗು ಇತ್ತೀಚಿಗೆ ಗ್ರಾಮೀಣ ಪ್ರದೇಶಕ್ಕೂ ವ್ಯಾಪಿಸುತ್ತಿರುವುದು ಹಾಗೂ ಯುವ ಜನತೆ బలిಯಾಗುತ್ತಿರುವುದು ಗಂಭೀರ ವಿಷಯವಾಗಿದೆ, ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾಗಿದ್ದು ಮಾದಕ ವಸ್ತು ಸೇವನೆಯಿಂದ ದೂರವಿದ್ದು ಕಲಿಕೆಯತ್ತ ಹೆಚ್ಚು ಆಸಕ್ತಿ ವಹಿಸುವಂತೆ ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮೈಸೂರಿನ ಕ್ಲಿಯರ್ ಮೆಡಿ ರೆಡಿಯಂಟ್ ಆಸ್ಪತ್ರೆಯ ಡಾ.ಅನಿತಾ ಶೇಷಾದ್ರಿ ಮಾದಕ  ವಸ್ತು ಸೇವನೆಯಿಂದಾಗುವ ಅಪಾಯಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭ ಲಯನ್ಸ್ ಕ್ಲಬ್ ಜೋನಲ್ ಕೋ ಆರ್ಡಿನೇಟರ್ ಕೆ.ಎ ಮಹದೇವಪ್ಪ, ಕಾರ್ಯದರ್ಶಿ ಜೆ.ಗಿರೀಶ್, ಕ್ಲಿಯರ್ ಮೆಡಿ ರೇಡಿಯಂಟ್ ಆಸ್ಪತ್ರೆ ಮಾರುಕಟ್ಟೆ ವ್ಯವಸ್ಥಾಪಕ ಮಹೇಶ್ ಹಾಗೂ ಸರ್ಕಾರಿ ಐಟಿಐ ಕಾಲೇಜು ತರಬೇತಿ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಇದ್ದರು.