ಮನೆ ಅಪರಾಧ ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

0

ತುಮಕೂರು: ಸಾಲಬಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ.

ಸಿದ್ದಗಂಗಯ್ಯ (62), ಸುನಂದಮ್ಮ, ಗೀತಾ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು.

ಮೃತರು ತುಮಕೂರಿನ ಮರಳೂರು ನಿವಾಸಿಗಳಾದ ತಂದೆ, ತಾಯಿ, ಮಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಾಕಷ್ಟು ಸಾಲ ಮಾಡಿಕೊಂಡಿದ್ದ ಸಿದ್ದಗಂಗಯ್ಯ ಕಳೆದ ಎರಡು ವರ್ಷಗಳ ಹಿಂದೆ ಕೆಇಬಿ ಯಲ್ಲಿ ನಿವೃತ್ತಿ ಹೊಂದಿದ್ರು.  ಬೆಂಗಳೂರಿನ ಮಲ್ಲೇಶ್ವರಂ ಬಳಿಯಿರುವ ಕೆಸಿ  ಜನರಲ್ ಆಸ್ಪತ್ರೆ ಬಳಿ ಟೀ ಶಾಪ್ ಇಟ್ಟುಕೊಂಡಿದ್ದರು.

ಇಂದು ಬೆಳಗ್ಗಿನ ಜಾವ ಆಟೋದಲ್ಲಿ ಬಂದು ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೈಲು ಸಿಕ್ಕಿದ ಪರಿಣಾಮ ಮೃತ ದೇಹಗಳು ಚೆಲ್ಲಾಪಿಲ್ಲಿಯಾಗಿವೆ. ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಮೃತದೇಹಗಳನ್ನು ರವಾನಿಸಲಾಗಿದೆ.

ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.