ಮನೆ ಅಪರಾಧ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

0

ತುಮಕೂರು: ತುಮಕೂರಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು‌ ಜಿಲ್ಲೆ ಕೊರಟಗೆರೆ ತಾಲೂಕಿನ ಅರಸಾಪುರ ಗ್ರಾಮದ ಬಳಿ ನಡೆದಿದೆ.

ದ್ವಿಚಕ್ರ ಹಾಗೂ ವಾಹನ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ದುರಂತ ಸಂಭವಿಸಿದ್ದು, ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದರು.

ಮಧುಗಿರಿಯಿಂದ ಗೌರಿಬಿದನೂರು ಕಡೆಗೆ ಹೋಗುವಾಗ ಈ ಅವಘಡ‌ ಸಂಭವಿಸಿದ್ದು, ತಾಯಿ, ಮಗ ಹಾಗೂ ಅಣ್ಣನ ಮಗ ದುರಂತದಲ್ಲಿ ಸಾವನ್ನಪ್ಪಿದ್ದಾರೆ.

ಮೃತರು ಮಧುಗಿರಿ ಮೂಲದ ವೀರೇನಹಳ್ಳಿ ತಾಂಡದ ವಾಸಿಗಳು ಎನ್ನಲಾಗಿದೆ.

ಘಟನೆ ನಡೆಯುತ್ತಿದ್ದಂತೆ ಲಾರಿ ಚಾಲಕ ಪರಾರಿಯಾಗಿದ್ದು, ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.